ಹುಟ್ಟುಹಬ್ಬದಂದು ಶಾಲೆಗಳಿಗೆ ಕ್ರೀಡಾ ಪರಿಕರ ವಿತರಿಸಿ ಅರ್ಥಪೂರ್ಣ ಆಚರಣೆ
Meaningful celebration: Distribution of sports equipment to schools on the occasion of the birthday.
ಬೈಲಹೊಂಗಲ ೨೪: ಸಮಾಜಮುಖಿ ಚಿಂತನೆ, ಯುವಕರಿಗೆ ಪ್ರೋತ್ಸಾಹ ಹಾಗೂ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಉಪಾಧ್ಯಕ್ಷರು, ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಾಜಿ ಪುರಸಭೆ ಸದಸ್ಯರಾದ ಗುರು ಮೆಟಗುಡ್ಡ ಅವರು ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.
ಹುಟ್ಟುಹಬ್ಬದ ಅಂಗವಾಗಿ ಬೈಲಹೊಂಗಲ ಮತಕ್ಷೇತ್ರದ ಒಕ್ಕುಂದ, ಹೊಸೂರು ಹಾಗೂ ಬೈಲಹೊಂಗಲ ನಗರದ ವಿವಿಧ ಶಾಲೆಗಳಿಗೆ ಕ್ರೀಡಾ ಪರಿಕರಗಳನ್ನು ವಿತರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಕಾರ್ಯಕ್ಕೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರು ಮೆಟಗುಡ್ಡ, “ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವವೂ ಬೆಳೆಯಬೇಕು. ಕ್ರೀಡೆಯಿಂದ ದೈಹಿಕ ಆರೋಗ್ಯದೊಂದಿಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಗತ್ಯ ಕ್ರೀಡಾ ಸೌಲಭ್ಯಗಳು ದೊರೆಯಬೇಕು ಎಂಬುದು ನನ್ನ ಆಶಯ” ಎಂದರು.
ಕ್ರೀಡಾ ಪರಿಕರಗಳನ್ನು ಪಡೆದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗುರು ಮೆಟಗುಡ್ಡ ಅವರ ಸಾಮಾಜಿಕ ಕಾಳಜಿಯನ್ನು ಶ್ಲಾಘಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು ಬೈಲಹೊಂಗಲದ ಪ್ರತಿಷ್ಠಿತ ಅರ್ಬನ್ ಬ್ಯಾಂಕ್ನ ನಿರ್ದೇಶಕರಾಗಿ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷರಾಗಿ ಹಾಗೂ ಸಮಾಜ ಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಬಡವರ ಬಂಧು, ಯುವಕರ ನೆಚ್ಚಿನ ‘ದಾದಾ’, ಹಿರಿಯರ ಮಮತೆಯ ‘ಗುರುಪ್ಪ’ ಹಾಗೂ ತರುಣರ ವಾತ್ಸಲ್ಯದ ‘ಸಾವಕಾರ’ ಎಂಬ ಪ್ರೀತಿಯ ಹೆಸರಿನಿಂದ ಗುರುತಿಸಿಕೊಂಡಿರುವ ಅವರು ಜನಪರ ಕಾರ್ಯಗಳ ಮೂಲಕ ಜನರೊಂದಿಗೆ ನಿರಂತರವಾಗಿ ಬೆರೆಯುತ್ತಿದ್ದಾರೆ.
ರಾಜಕೀಯ, ಸಹಕಾರ, ಕೃಷಿ, ಶಿಕ್ಷಣ, ಕ್ರೀಡೆ ಹಾಗೂ ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಗುರು ಮೆಟಗುಡ್ಡ ಅವರ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 