ಡಾ. ಪ್ರಭಾಕರ ಕೋರೆ ಅವರ 79ನೇ ಜನ್ಮದಿನ ಅಂಗವಾಗಿ ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅರ್ಥಪೂರ್ಣ ಆಚರಣೆ

ಡಾ. ಪ್ರಭಾಕರ ಕೋರೆ ಅವರ 79ನೇ ಜನ್ಮದಿನ ಅಂಗವಾಗಿ ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅರ್ಥಪೂರ್ಣ ಆಚರಣೆ  Meaningful celebration of Dr. Prabhakar Kore's 79th birthday at the KLE College of Agricultural Scie

ಲೋಕದರ್ಶನ ವರದಿ

ಬೆಳಗಾವಿ 03;  ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ 79ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ವಿದ್ಯಾಧಿಕಾರಿಗಳಾದ ಡಾ. ಬಿ. ಡಿ. ಬಿರಾದಾರ ವಹಿಸಿದ್ದರು.  ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ. ಎಸ್‌. ಎಸ್‌. ಡೊಳ್ಳಿ ಭಾಗವಹಿಸಿ "ಮುಂದಿನ ತಲೆಮಾರಿನ ಕೃಷಿ ಉದ್ಯಮಿಗಳ ನಿರ್ಮಾಣ" ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೃಷಿ ಪದವೀಧರರಿಗೆ ಉದ್ಯಮಶೀಲತೆಯಲ್ಲಿ ಅಪಾರ ಅವಕಾಶಗಳಿದ್ದು, ಕೃಷಿ ಕ್ಷೇತ್ರದ ಇತ್ತೀಚಿನ ತಾಂತ್ರಿಕ ಆವಿಷ್ಕಾರಗಳು, ಮೌಲ್ಯವರ್ಧನೆ, ಕೃಷಿ ಆಧಾರಿತ ಸ್ಟಾರ್ಟಅಪ್ಗಳು ಹಾಗೂ ಸರ್ಕಾರದ ಪ್ರೋತ್ಸಾಹಕ ಯೋಜನೆಗಳನ್ನು ಸಮರ​‍್ಕವಾಗಿ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉದ್ಯೋಗ ಅರಸುವುದಕ್ಕಿಂತ ಉದ್ಯೋಗ ಸೃಷ್ಟಿಸುವ ಮನೋಭಾವ ಬೆಳೆಸಿಕೊಳ್ಳುವುದು ಕಾಲದ ಅಗತ್ಯ ಎಂದು ತಿಳಿಸಿದರು.  

ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿ ಮಾತನಾಡಿ, ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ ಶಿಕ್ಷಣ ಹಾಗೂ ಸಮಾಜಮುಖಿ ಸೇವೆಯನ್ನು ಸ್ಮರಿಸಿದರು. ಕೆಎಲ್‌ಇ ಸಂಸ್ಥೆಯ ಶೈಕ್ಷಣಿಕ ಪರಂಪರೆ ಮತ್ತು ಸಮಾಜ ನಿರ್ಮಾಣದಲ್ಲಿ ಅದರ ಪಾತ್ರವನ್ನು ವಿವರಿಸಿದ ಅವರು, ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯವು ಡಾ. ಕೋರೆ ಅವರ ಕನಸಿನ ಯೋಜನೆಗಳಲ್ಲಿ ಒಂದಾಗಿದ್ದು, ಅವರಿಗೆ ಅತ್ಯಂತ ಪ್ರಿಯವಾದ ಸಂಸ್ಥೆಯಾಗಿದೆ ಎಂದು ಹೇಳಿದರು.  

ಅಧ್ಯಕ್ಷೀಯ ಭಾಷಣದಲ್ಲಿ ಡಾ. ಬಿ. ಡಿ. ಬಿರಾದಾರ ಅವರು ಡಾ. ಪ್ರಭಾಕರ ಕೋರೆ ಅವರ ದೂರದೃಷ್ಟಿಯ ನಾಯಕತ್ವವನ್ನು ಪ್ರಶಂಸಿಸಿದರು. ಕೃಷಿ ಶಿಕ್ಷಣದೊಂದಿಗೆ ಉದ್ಯಮಶೀಲತಾ ಕೌಶಲಗಳನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ ಅವರು, ನವೀನ ಆಲೋಚನೆಗಳು ಮತ್ತು ತಂತ್ರಜ್ಞಾನ ಅಳವಡಿಕೆಯಿಂದ ಕೃಷಿ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಬಹುದೆಂದು ಅಭಿಪ್ರಾಯಪಟ್ಟರು.  

ಕಾರ್ಯಕ್ರಮದ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವನ ಮಹೋತ್ಸವ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದ ಕ್ಷೇತ್ರ ವ್ಯವಸ್ಥಾಪಕರಾದ ಶ್ರೀ ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು. ಡಾ. ಮಧುರಿಮಾ ವಿನೋದ್ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಸೌರಭ ಮುನ್ನೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ಪ್ರವೀಣ ಎಂ. ಬಿ. ವಂದನಾರೆ​‍್ಣ ಸಲ್ಲಿಸಿದರು.