ನುಲಿಯ ಚಂದಯ್ಯ ಅವರ ಜಯಂತಿ ಜಿಲ್ಲಾಡಳಿತದಿಂದ ಅರ್ಥಪೂರ್ಣ ಆಚರಣೆ
Meaningful celebration of Nuliya Chandayya's Jayanti by the district administration
ಲೋಕದರ್ಶನ ವರದಿ
ವಿಜಯಪುರ 28: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ ಉದ್ಘಾಟಿಸಿದರು.
ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಮಾತನಾಡಿ, ಶರಣ ನುಲಿಯ ಚಂದಯ್ಯ ಅವರು ಕಾಯಕ, ದಾಸೋಹ ಹಾಗೂ ಸಮಾನತೆಯ ತತ್ವಗಳ ಸಾರಿ ಅದರಂತೆ ನಡೆದು ಸಮಾಜಕ್ಕೆ ಮಾದರಿಯಾಗಿದ್ದಾರೆ.
ಅವರ ಆದರ್ಶ ಮತ್ತು ಸಂದೇಶ ಇಂದಿನ ಪೀಳಿಗೆ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನುಲಿಯ ಚಂದಯ್ಯ ಅವರು 12ನೇ ಶತಮಾನದಲ್ಲಿ ಕಾಯಕದ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕಾಯಕಕ್ಕೆ ಘನತೆ ತಂದುಕೊಟ್ಟ ಶರಣರ ಜೀವನ ಮತ್ತು ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ. ಯುವಜನರು ಶರಣರ ಜೀವನ, ವಚನಗಳು ಹಾಗೂ ಅವರ ಆದರ್ಶಗಳನ್ನು ಅರಿತುಕೊಳ್ಳಬೇಕು.
12ನೇ ಶತಮಾನದಲ್ಲಿ ನುಲಿಯ ಚಂದಯ್ಯ ಅವರ ಕೊಡುಗೆ ಅಪಾರವಾಗಿದೆ. ತಮ್ಮ ಜೀವನಾನುಭವ ಹಾಗೂ ಕಾಯಕದ ಮೂಲಕ ಸಮಾಜಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.
ನುಲಿಯ ಚಂದಯ್ಯ ಅವರು ಕಾಯಕಕ್ಕೆ ಮಹತ್ವ ನೀಡುವುದರೊಂದಿಗೆ ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರಿದ್ದಾರೆ. ಅವರ ಜೀವನಾದರ್ಶಗಳನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು ಎಂದು ಅವರು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ, ಮೋಹನ ಕಟ್ಟಿಮನಿ ಅವರು ನುಲಿಯ ಚಂದಯ್ಯ ಅವರ ಜೀವನ ಹಾಗೂ ಅವರು ನಡೆದುಬಂದ ದಾರಿಯ ಕುರಿತು ನುಲಿಯ ಚಂದಯ್ಯ ಅವರ ಕಾಯಕನಿಷ್ಠೆ, ಶರಣ ತತ್ವಗಳ ಮೇಲಿನ ಬದ್ಧತೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು ಅವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಅಶೋಕ ಕಲ್ಲಗಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಿವಿಧ ಇಲಾಖೆಗಳ ಅಧಿಕಾರಿಗಳು,ಸಿಬ್ಬಂದಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕಿಂತ ಮೊದಲು: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ನುಲಿಯ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆಯು ನಗರ ಪ್ರಮುಖ ವೃತ್ತಗಳ ಮೂಲಕ ಸಾಗಿ ನಂತರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 