ಕೊಪ್ಪಳ 20: ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ಡಿ. 29 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕರಾದ ಕೃಷಣಮೂತರ್ಿ ದೇಸಾಯಿ ಅವರು ಹೇಳಿದರು.
ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಕೇಂದ್ರದಲ್ಲಿ ವಿಶ್ವ ಮಾನವ ದಿನಾಚರಣೆಯನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನವನ್ನಾಗಿ ವಿಜ್ರಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಡಿ. 29 ರಂದು ಬೆಳಿಗ್ಗೆ 10-30 ಗಂಟೆಗೆ ಏರ್ಪಡಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಅಂದು ನಾಡಗೀತೆ ಮತ್ತು ರೈತಗೀತೆ ಇವುಗಳ ಜೊತೆಯಲ್ಲಿ ಕುವೆಂಪುರವರು ರಚಿಸಿರುವ ಕವನಗಳ ಗಾಯನ ಹಾಗೂ ಕಲಾವಿದರಿಂದ ನೃತ್ಯ ರೂಪಕ ಕಾರ್ಯಕ್ರಮಗಳು ಜರುಗಲಿವೆ. ನೂರಿತ ತಜ್ಞರಿಂದ ಕುವೆಂಪು ಅವರ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಕುವೆಂಪುರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಾಗಬೇಕು. ಶಿಕ್ಷಣ ಇಲಾಖೆಯು ಕುವೆಂಪುರವರ ವಿಶ್ವ ಮಾನವ ಕುರಿತು ಶಾಲಾ ಮಕ್ಕಳಿಗೆ ಪ್ರಭಂದ, ಕಾಲೇಜು ಮಕ್ಕಳಿಗೆ ಭಾಷಣ ಸ್ಪಧರ್ೆಗಳನ್ನು ಆಯೋಜಿಸಬೇಕು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಗುವುದು. ಅಲ್ಲದೇ ವಿಶ್ವ ಮಾನವ ದಿನವನ್ನು ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ಆಚರಿಸುವಂತೆ ಹಾಗೂ ಡಿ. 29 ರ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜುಗಳ ವಿದ್ಯಾಥರ್ಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆಯು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಶಾಲಾ ಕಾಲೇಜುಗಳ ವಿದ್ಯಾಥರ್ಿಗಳು, ಸಾಹಿತಿಗಳು, ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕರಾದ ಕೃಷಣಮೂತರ್ಿ ದೇಸಾಯಿ ಅವರು ಮನವಿ ಮಾಡಿದರು.
ಸಭೆಯಲ್ಲಿ ಡಿ.ವೈ.ಎಸ್.ಪಿ. ಸಂದೀಗವಾಡ್, ಹಿರಿಯ ಸಾಹಿತಿಗಳಾದ ಹೆಚ್.ಎಸ್. ಪಾಟೀಲ್, ಅಲ್ಲಮಪ್ರಭು ಬೆಟ್ಟದೂರ, ವಿಠ್ಠಪ್ಪ ಗೋರಂಟ್ಲಿ, ಸ್ವಾತಂತ್ರ್ಯ ಯೋಧರಾದ ಸುಮಂತರಾವ್ ಪಟವಾರಿ, ನಿವೃತ್ತ ಜಿಲ್ಲಾ ವಾತರ್ಾಧಿಕಾರಿ ಬಸವರಾಜ ಆಕಳವಾಡಿ, ಕಸಾಪಾ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ, ಮಹೇಶಬಾಬು ಸುವರ್ೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದು, ಉಪಯುಕ್ತ ಸಲಹೇ ಸೂಚನೆಗಳನ್ನು ನೀಡಿದರು.