ಗಾಂಧಿ ವೃತ್ತ ನವೀಕರಣಕ್ಕೆ ಕ್ರಮ: ಅ.2ರಂದು ಶಂಕುಸ್ಥಾಪನೆ
Measures for Gandhi Circle renovation: Foundation stone to be laid on October 2
ವಿಜಯಪುರ, ಆ.29: ನಗರದ ಐತಿಹಾಸಿಕ ಗಾಂಧಿ ವೃತ್ತವನ್ನು ನವೀಕರಿಸಲು ಕ್ರಮ ಕೈಗೊಳ್ಳಲಾಗಿದ್ದು, ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನದಂದು ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ನಗರದಲ್ಲಿರುವ ತಮ್ಮ ಗೃಹಕಚೇರಿಯಲ್ಲಿ ಶನಿವಾರ ಸಭೆ ನಡೆಸಿದ ಸಚಿವರು, ಗಾಂಧಿ ವೃತ್ತದ ಕಾಮಗಾರಿಯ ವಿನ್ಯಾಸ, ರೂಪುರೇಷೆ ಹಾಗೂ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಗಾಂಧಿ ವೃತ್ತ ಹಲವು ವರ್ಷಗಳಿಂದ ಹಳೆಯ ರೂಪದಲ್ಲಿಯೇ ಉಳಿದಿದೆ. ಇಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಯೂ ಚಿಕ್ಕದಾಗಿದ್ದು, ಬೆಳೆಯುತ್ತಿರುವ ವಿಜಯಪುರ ನಗರದ ಸೌಂದರ್ಯಕ್ಕೆ ತಕ್ಕಂತೆ ವೃತ್ತವನ್ನು ನವೀಕರಿಸುವ ಅಗತ್ಯವಿದೆ ಎಂದರು.
ಸತ್ಯ, ಅಹಿಂಸೆ, ಶಾಂತಿ ಹಾಗೂ ಸಮಾನತೆಯ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಸ್ಮರಿಸುವ ಉದ್ದೇಶದಿಂದ ಗಾಂಧಿ ವೃತ್ತವನ್ನು ಸುಂದರೀಕರಿಸಿ, ಭವ್ಯವಾದ ಗಾಂಧೀಜಿ ಪುತ್ಥಳಿಯನ್ನು ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ವೃತ್ತದ ನವೀಕರಣದ ಕುರಿತು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದರು. ಅದರಂತೆ ಖ್ಯಾತ ವಾಸ್ತುಶಿಲ್ಪಿ ಆನಂದ ಕುಸೂರ್ ಸಿದ್ಧಪಡಿಸಿರುವ ವಿನ್ಯಾಸವನ್ನು ಸಚಿವರಿಗೆ ತೋರಿಸಲಾಯಿತು. ವಿನ್ಯಾಸವನ್ನು ಪರೀಶೀಲಿಸಿದ ಸಚಿವರು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಕಾಮಗಾರಿಯನ್ನು ತ್ವರಿತವಾಗಿ ಕೈಗೆತ್ತಿಕೊಂಡು, ಮುಂಬರುವ ಗಾಂಧಿ ಜಯಂತಿಯಂದೇ ಗಾಂಧಿ ವೃತ್ತದ ನವೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಅಧ್ಯಕ್ಷ ಬಾಪೂಗೌಡ ಪಾಟೀಲ ಶೇಗುಣಸಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಆಯುಕ್ತ ರಾಜಶೇಖರ ಡಂಬಳ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 