ಕಾಲುವೆ ದುರಸ್ತಿ ಮಾಡಿ ಕೊನೆ ಹಂತದವರೆಗೆ ನೀರು ತಲುಪಿಸಲು ಕ್ರಮ: ಸಚಿವ ಸತೀಶ ಜಾರಕಿಹೊಳಿ

ಕಾಲುವೆ ದುರಸ್ತಿ ಮಾಡಿ ಕೊನೆ ಹಂತದವರೆಗೆ ನೀರು ತಲುಪಿಸಲು ಕ್ರಮ: ಸಚಿವ ಸತೀಶ ಜಾರಕಿಹೊಳಿ  Measures to repair canals and ensure water reaches the tail-end areas: Minister Satish Jarkiholi

ಮುಗಳಖೋಡ 01 :  ರಾಯಬಾಗ ತಾಲೂಕಿನ ಮುಗಳಖೋಡ ಚೌಕಿ ಪಟ್ಟಣದ ಘಟಪ್ರಭಾ ಎಡದಂಡೆ ಮುಖ್ಯ ಕಾಲುವೆ ಹಾಗೂ ಮೇಖಳಿ ಕೆರೆಗಳಿಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರೀಶೀಲನೆ ನಡೆಸಿದರು.  ಕಾಲುವೆಯ ಹಾನಿಗೊಳಗಾದ ಭಾಗಗಳಿಂದ ನೀರು ಸೋರಿಕೆಯಾಗುತ್ತಿರುವ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಕಾಲುವೆ ದುರಸ್ತಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಕೊನೆಯ ಹಂತದವರೆಗೂ ನೀರು ಸಮರ​‍್ಕವಾಗಿ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ ಸಚಿವರು, ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನೀರಿನ ಸಮರ​‍್ಕ ಬಳಕೆಗೆ ಕ್ರಮ ಕೈಗೊಳ್ಳುವಂತೆ ಹೇಳಿದರು.  ಈ ವೇಳೆ ಗ್ರಾಮಸ್ಥರು ರಸ್ತೆ ಕಾಮಗಾರಿ ವಿಳಂಬ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಸಚಿವರ ಗಮನಕ್ಕೆ ತಂದರು. ಸಚಿವರು ಅಹವಾಲುಗಳನ್ನು ಆಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.