ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘಟನೆಯ ಸಮಾರೋಪ ಕಾರ್ಯಕ್ರಮ

ಲೋಕದರ್ಶನ ವರದಿ

ಬೆಳಗಾವಿ, 20: ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘಟನೆಯ ಸಮಾರೋಪ ಕಾರ್ಯಕ್ರಮವು ದಿನಾಂಕ: 17 ಮೇ 2019ರಂದು ಜರುಗಿತು.

ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಿದ್ದ ಕಾಟವೆ ಇಂಡಸ್ಟ್ರೀಸನ ವ್ಯವಸ್ಥಾಪಕ ನಿದರ್ೇಶಕರಾದ ಸುನಿಲ ಕಾಟವೆ  ಅವರು ತಮ್ಮ ಅತಿಥಿ ಭಾಷಣದಲ್ಲಿ ಹೊರ ಹೋಗುವ ವಿದ್ಯಾರ್ಥಿಗಳಗೆ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು, ಪದವಿಯ  ನಂತರ ಉದ್ಯೋಗವನ್ನು ಹುಡುಕುವದರ ಬದಲು ತಾವೇ ಇನ್ನೊಬ್ಬರಿಗೆ ಉದ್ಯೋಗವನ್ನು ದೊರಕಿಸಿಕೊಡುವ ಹಾಗೆ ಜೀವನದಲ್ಲಿ ಬೆಳೆಯ ಬೇಕೆಂದು ಸಲಹೆ ನೀಡಿದರು.  ಅವರು ತಮ್ಮ ಭಾಷಣದಲ್ಲಿ ತಮ್ಮ ಜೀವನದ ಅನುಭವಗಳನ್ನು ಮತ್ತು ಹೇಗೆ ಆದರ್ಶ ವಾಣಿಜ್ಯೋದ್ಯಮಿಯಾಗಿ ಬೆಳೆದ ಸಂಗತಿಯನ್ನು ವಿದ್ಯಾಥರ್ಿಗಳಿಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್.ವಿ.ಇಟ್ಟಿ ಮಾತನಾಡುತ್ತಾ ಹೊರ ಹೋಗುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಯು.ಸಿ.ಕಪಾಲೆ ಸ್ವಾಗತಿಸಿದರು. ಕುಮಾರಿ ಐಶ್ವರ್ಯ ಕುಮಾರಿ ಅಶ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.  ಕಾರ್ಯಕ್ರಮದಲ್ಲಿ ವಿದ್ಯಾಥರ್ಿ ಸಂಘಟನೆಯ ಸಂಯೋಜಕರಾದ ಪ್ರೊ. ಪ್ರಸಾದ ಕಲ್ಲೋಳಿಮಠ, ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದಶರ್ಿ ಕುಮಾರ ಸತೀಶ ತುಳಜನ್ನವರ, ವಿಭಾಗದ ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿಗಳು ಕಾರ್ಯಕ್ರಮದಲ್ಲಿ 

ಭಾಗವಹಿಸಿದ್ದರು.