ಕಲಾಪ ಚಿತ್ರೀಕರಣಕ್ಕೆ ಮಾಧ್ಯಮ ನಿರ್ಬಂಧ ಪ್ರಾಯೋಗಿಕ: ಸ್ಪೀಕರ್
ಬೆಂಗಳೂರು, ಅ.10: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ. ಕಲಾಪ ದೃಶ್ಯ ಚಿತ್ರೀಕರಣಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರವಾಗಿ ಸುದ್ದಿಗಾರರಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸ್ಪೀಕರ್, ಇಂದಿನಿಂದ ಅಧಿವೇಶನ ಆರಂಭವಾಗುತ್ತಿದ್ದು, ರಾಜ್ಯದ ಅಭಿವೃದ್ಧಿ ಬೆಳವಣಿಗೆಗೆ ಸದನದಲ್ಲಿ ಚರ್ಚೆ ಆಗಬೇಕು ಎನ್ನುವ ಅಪೇಕ್ಷೆಯಿದೆ. ಯಾವುದನ್ನು ನಾವು ಮುಚ್ಚಿಡುವುದಿಲ್ಲ. ಈ ಬಗ್ಗೆ ಕೆಲ ವರ್ಷಗಳ ಹಿಂದೆಯೇ ಚರ್ಚೆ ನಡೆದಿತ್ತು. ಸ್ಪೀಕರ್ ಸಮ್ಮೇಳನದಲ್ಲಿ ನಿರಂತರವಾಗಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಚಚರ್ೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಹಾಗೇಯೇ ನಾವು ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು. ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ಇರಲಿದೆ. ಬಳಿಕ ಇದನ್ನು ಮುಂದುವರೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಚರ್ಚಿಸಲಾಗುವುದು.ಈ ಮೂರು ದಿನಗಳಲ್ಲಿ ಬರುವ ಸಲಹೆ ಸೂಚನೆ ಪರಿಗಣಿಸಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 