ಸಮಾಜದ ಸಮಸ್ಯೆಗಳಿಗೆ ಮಾಧ್ಯಮಗಳು ಸ್ಪಂದಿಸಬೇಕು: ಶಾಸಕ ರಾಜು ಕಾಗೆ
Media must respond to societal issues: MLA Raju Kage
ಲೋಕದರ್ಶನ ವರದಿ
ಕಾಗವಾಡ 22: ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಶಕ್ತಿ ಮಾಧ್ಯಮಗಳಿಗಿದೆ. ಪತ್ರಕರ್ತರು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ, ಸಾರ್ವಜನಿಕರ ಪರವಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.
ಪಟ್ಟಣದ ಆಚಾರ್ಯ 108 ವಿದ್ಯಾಸಾಗರ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಪತ್ರಕರ್ತರು ಕೇವಲ ಸುದ್ದಿಗಳನ್ನು ಪ್ರಕಟಿಸುವುದಕ್ಕೆ ಸೀಮಿತರಾಗದೆ, ಸಮಾಜಮುಖಿ ಮನೋಭಾವದಿಂದ ಜನಸಾಮಾನ್ಯರಿಗೆ ಉಪಯುಕ್ತವಾದ ವಿಷಯಗಳನ್ನು ಬೆಳಕಿಗೆ ತಂದು ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಆನಂದ ಸವದಿ ಮಾತನಾಡಿ, ಕಾಗವಾಡ ಹಾಗೂ ಅಥಣಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಗಳು ಮುಂದಿನ ವರ್ಷದಿಂದ ಪತ್ರಿಕಾ ದಿನಾಚರಣೆಯನ್ನು ಜಂಟಿಯಾಗಿ ಆಚರಿಸಬೇಕು.
ಅದರ ಸಂಪೂರ್ಣ ವೆಚ್ಚವನ್ನು ತಾವು ಭರಿಸುವುದಾಗಿ ಘೋಷಿಸಿದರು. ಅಲ್ಲದೆ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಶಾಸಕ ರಾಜು ಕಾಗೆ ಅವರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಇಬ್ಬರೂ ಪರಸ್ಪರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 