ಅ.6 ಕ್ಕೆ ವೈದ್ಯಕೀಯ ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ
Medical Education Minister to visit Koppal district on October 6
ಕೊಪ್ಪಳ 04 : ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11.15 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಿಮ್ಸ್ ವತಿಯಿಂದ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ ಆಯೋಜಿಸಿರುವ 450 ಹಾಸಿಗೆಯ ಸಾಮರ್ಥ್ಯದ ಬೋಧಕ ಆಸ್ಪತ್ರೆಯ ನೂತನ ಕಟ್ಟಡ ಮತ್ತು ಧರ್ಮಶಾಲಾ ಕಟ್ಟಡದ ಉದ್ಘಾಟನೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕು ಸ್ಥಾಪನೆ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸುವರು.
ಸಂಜೆ 4.30 ಗಂಟೆಗೆ ವಿಶೇಷ ವಿಮಾನದ ಮೂಲಕ ಮಾನ್ಯ ಮುಖ್ಯಮಂತ್ರಿಗಳೊಮದಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 