ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
Medical Evaluation Camp for Children with Special Needs
ಹುಬ್ಬಳ್ಳಿ 05: ಇಂದು ಎಂ.ಪಿ.ಎಸ್ ಉಣಕಲ್ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಧಾರವಾಡ, ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹುಬ್ಬಳ್ಳಿ ಗ್ರಾಮೀಣ ಇವುಗಳ ಸಂಯುಕ್ತಾಶ್ರಯದಲ್ಲಿ ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ ಕಲಿಯುತ್ತಿರುವ 1 ರಿಂದ 10ನೇ ತರಗತಿಯ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗಾಗಿ ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ಅಲಿಂಕೋ ಸಂಸ್ಥೆ ಹಾಗೂ ಡಿಮ್ಯಾನ್ಸ ವೈದ್ಯರು ಮಕ್ಕಳನ್ನು ಪರೀಕ್ಷಿಸಿ ಸಾಧನ ಸಲಕರಣೆಗಳಿಗೆ ಶಿಫಾರಸ್ಸು ಮಾಡಿದರು. 180 ಮಕ್ಕಳು ಶಿಬಿರದ ಉಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ್ ಬೊಮ್ಮಕ್ಕನವರ, ಸಮನ್ವಯಾಧಿಕಾರಿ ಸಂತೋಷ ದಂಡಗಲ್, ತಾಲೂಕು ಪಂಚಾಯತ್ ಎಂ.ಆರ್.ಡಬ್ಲ್ಯೂ ಮಹಾಂತೇಶ ಕುರ್ತಕೋಟಿ, ನಿವೃತ್ತ ಬಿ.ಐ.ಇ.ಆರ್.ಟಿ. ಜ್ಯೋತಿ ಕಾಮಟೆ, ಬಿಆರ್‌ಪಿ, ಸಿಆರ್‌ಪಿ, ವಿಶೇಷ ಅಗತ್ಯತೆವುಳ್ಳ ಮಕ್ಕಳು, ಪಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 