ದೇಶಿಕೇಂದ್ರ ಮಹಾಸ್ವಾಮಿಜಿ ಅವರನ್ನು ಭೇಟಿ ಮಾಡಿ, ಮಾಲಾರೆ್ಣ
ಹುಬ್ಬಳ್ಳಿ 20: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮೈಸೂರು ಸುತ್ತೂರು ವೀರಸಿಂಹಾಸನ ಮಠದ ಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿ ಅವರನ್ನು ಭೇಟಿ ಮಾಡಿ, ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಿಸಿದರು, ನಮನಗಳನ್ನು ಸಲ್ಲಿಸಿದರು. ದರ್ಶನ ಆಶೀರ್ವಾದ ಪಡೆದರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಡಿ.ಕುಂಬಾರ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ನ್ಯಾಯಾಧೀಶರು, ನ್ಯಾಯವಾದಿಗಳು, ಗಣ್ಯರು, ಪ್ರಾಚಾರ್ಯ ಡಾ. ಮಹೇಶ ಡಿ. ಹೊರಕೇರಿ, ಕವಿವ ಸಂಘದ ಶಂಕರ ಹಲಗತ್ತಿ, ಸತೀಶ ತುರಮರಿ, ಡಾ. ಸಂಗಮನಾಥ ಲೋಕಾಪುರ, ಡಾ. ಲಿಂಗರಾಜ ಅಂಗಡಿ, ಕೆ.ಎಸ್.ಕೋರಿಶೆಟ್ಟರ, ಡಾ. ಬಶೆಟ್ಟಿ, ಪ್ರೊ ಕೊಟ್ಟೂರಶೆಟ್ಟರ, ಮುಂತಾದವರು ಇದ್ದರು.