ಮೆಗಾ ಮಾರ್ಟ್ ಕಾಮಗಾರಿ ಶೀಘ್ರ ಪೂರ್ಣ
Mega Mart construction to be completed soon
ಮುದ್ದೇಬಿಹಾಳ 19: ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಮಾರ್ಟ್ ಕಟ್ಟಡದ ಕಾಮಗಾರಿ ವೇಗ ಪಡೆದುಕೊಂಡಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು. ಪಟ್ಟಣದ ದುರ್ಗಾದೇವಿ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಮೆಗಾ ಮಾರ್ಟ್ ಕಾಮಗಾರಿ ಪರೀಶೀಲಿಸಿ ಅವರು ಮಾತನಾಡಿದರು.
ಸುಮಾರು 15 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಮಾರ್ಟ್ನಲ್ಲಿ ವ್ಯಾಪಾರ ಮಳಿಗೆಗಳ ಜೊತೆಗೆ ಗ್ರಾಹಕರ ವಾಹನ ನಿಲುಗಡೆಗೆ ಪಾರ್ಕಿಂಗ್, ಸಭಾ ಭವನ, ಲಿಫ್ಟ್ ಸೇರಿದಂತೆ ವಿವಿಧ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಇದರಿಂದ ವ್ಯಾಪಾರಸ್ಥರಿಗೆ ಸುಸಜ್ಜಿತ ಮಳಿಗೆಗಳು ದೊರೆಯುವುದರ ಜೊತೆಗೆ ಮಾರುಕಟ್ಟೆ ಪ್ರದೇಶದ ಸಂಚಾರ ಸಮಸ್ಯೆಯೂ ಕಡಿಮೆಯಾಗಲಿದೆ ಎಂದರು. ಕಾಮಗಾರಿಗೆ ಈಗಾಗಲೇ ಎರಡು ಹಂತಗಳಲ್ಲಿ ತಲಾ 5 ಕೋಟಿಯಂತೆ 10 ಕೋಟಿ ಅನುದಾನ ಮಂಜೂರಾಗಿದೆ. ಉಳಿದ ಕಾಮಗಾರಿ ಹಾಗೂ ಮೂಲಸೌಕರ್ಯ ಪೂರ್ಣಗೊಳಿಸಲು ಇನ್ನೂ 5 ಕೋಟಿ ಅಗತ್ಯವಿದ್ದು, ಹೆಚ್ಚುವರಿ ಅನುದಾನಕ್ಕೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೆಗಾ ಮಾರ್ಟ್ ಪೂರ್ಣಗೊಂಡ ಬಳಿಕ ಮಳಿಗೆಗಳನ್ನು ಸರ್ಕಾರದ ನಿಯಮಾನುಸಾರ ಹರಾಜು ಪ್ರಕ್ರಿಯೆ ಮೂಲಕ ಹಂಚಿಕೆ ಮಾಡಲಾಗುವುದು. ಸ್ಥಳೀಯ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ ಪಟ್ಟಣದ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದರು.
ಮೆಗಾ ಮಾರ್ಟ್ ಹಾಗೂ ಜಲಧಾರೆ ಯೋಜನೆಗಳ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ಎರಡೂ ಯೋಜನೆಗಳನ್ನು ಶೀಘ್ರ ಸಾರ್ವಜನಿಕರಿಗೆ ಸಮರ್ಿಸಲು ಉದ್ದೇಶಿಸಲಾಗಿದೆ. ಮುಖ್ಯಮಂತ್ರಿ ಹಾಗೂ ರಾಜ್ಯದ ಸಚಿವರನ್ನು ಆಹ್ವಾನಿಸಿ ಉದ್ಘಾಟನಾ ಕಾರ್ಯಕ್ರಮ ನಡೆಸಲು ಚಿಂತಿಸಲಾಗುತ್ತಿದೆ ಎಂದು ನಾಡಗೌಡ ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಮಾಜಿ ಅಧ್ಯಕ್ಷ ಮೆಹಬೂಬ ಗೊಳಸಂಗಿ, ನಗರಾಭಿವೃದ್ಧಿ ಇಲಾಖೆ ಎಇಇ ಜಗದೀಶ ನಾರಾಯಕರ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 