ಕೊಲ್ಹಾರ ತಾಲೂಕು ಬರಗಾಲ ಪೀಡಿತ ಘೋಷಣೆಗೆ ಆಗ್ರಹಿಸಿ ಮನವಿ
Memorandum demanding that Kolhar Taluk be declared drought-hit
ಕೊಲ್ಹಾರ 10: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕಾಲುವೆಗೆ ನೀರು ಹರಿಸಲು ಹಾಗೂ ಕೊಲ್ಹಾರ ತಾಲ್ಲೂಕು ಬರಪೀಡಿತ ಎಂದು ಘೋಷಿಸಲು ಜಿಲ್ಲಾ ಅಧಿಕಾರಿಗಳಿಗೆ ತಹಶೀಲ್ದಾರ ಮುಖಾಂತರ ಮನವಿಯನ್ನು ಗುರುವಾರ ತಹಶೀಲ್ದಾರ ಸಂತೋಷ ಮ್ಯಾಗೇರಿ ಯವರಿಗೆ ಮನವಿ ಸಲ್ಲಿಸಲಾಯಿತು. ಮನವಿ ನೀಡಿ ಮಾತನಾಡಿದ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ತಾಲೂಕ ಘಟಕ ಅಧ್ಯಕ್ಷ ಸೋಮು ಭೀ. ಬಿರಾದಾರ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿಗೆ (ಹಾಗೂ ಮುಳವಾಡ ಏತ ನೀರಾವರಿ ಕಾಲುವೆ 1 ನೇ ಹಂತ, 2ನೆ ಹಂತ ಹಾಗೂ 3 ನೇ ಹಂತ, ಕಾಲುವೆಗೆ ನೀರನ್ನು ತಕ್ಷಣ ಹರಿಸುವಂತೆ ಆಗ್ರಹಿಸಿದರು.
ವಿಜಯಪುರ ಜಿಲ್ಲೆಯಲ್ಲಿರುವ ಎಲ್ಲಾ ಕರೆಗಳನ್ನು ಸಂಪೂರ್ಣವಾಗಿ ತುಂಬಿಸಬೇಕು. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಳೆ ಆಗುತ್ತಿದ್ದು ಆದ ಕಾರಣ ಸಾಕಷ್ಟು ಒಳ ಹರಿವು ಇದ್ದು ತಕ್ಷಣ ಕಾಲುವೆಗೆ ಹರಿಸಬೇಕು. ರೈತರ ಹಿತ ದೃಷ್ಟಿಯಿಂದ ಸಂಬಂಧಿಸಿದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮುಳವಾಡ ಏತ ನೀರಾವರಿ ವ್ಯಾಪ್ತಿಗೆ ಕೂಡಲೇ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಗಾಲ ಎಂದು ಘೋಷಣೆ ಮಾಡಬೇಕು. ಮಳೆಯಾಗದ ಕಾರಣ ಹೊಲದಲ್ಲಿ ಗೋವಿನ ಜೋಳ, ತೊಗರಿ, ಉಳ್ಳಿ ಬೀಜ ಭತ್ತಿ ಹೋಗಿರುತ್ತವೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 