ಸರ್ಕಾರಿ ಶಾಲೆಗಳ ದ್ವಿಭಾಷಾ ನೀತಿ ವಿರೋಧಿಸಿ ಮನವಿ
Memorandum opposing the bilingual policy in government schools
ಲೋಕದರ್ಶನ ವರದಿ
ವಿಜಯಪುರ 07: ಸರ್ಕಾರಿ ಶಾಲೆಗಳಲ್ಲಿ ಜಾರಿಗೊಳಿಸಿರುವ ದ್ವಿಭಾಷಾ ಶಿಕ್ಷಣ ನೀತಿ ಹಾಗೂ ಶಿಕ್ಷಕರ ನೇಮಕಾತಿ ಅಧಿಸೂಚನೆಯನ್ನು ವಿರೋಧಿಸಿ ಅಖಿಲ ಭಾರತ ಸಾಹಿತ್ಯ ಪರಿಷತ್ (ನೋಂ.) ವಿಜಯಪುರ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸಮಿತಿಯ ಪದಾಧಿಕಾರಿಗಳು ಮಾತನಾಡಿ, ದ್ವಿಭಾಷಾ ಶಿಕ್ಷಣ ನೀತಿಯಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ಬೋಧನೆಯಲ್ಲಿ ಅಸಮಾನತೆ ಕಂಡುಬರುತ್ತಿದ್ದು, ಪರೀಕ್ಷೆಯಲ್ಲಿಯೂ ಇಂಗ್ಲಿಷ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ದೂರಿದರು.
ಇದೇ ವೇಳೆ, ಶಾಲಾ ಶಿಕ್ಷಣ ಇಲಾಖೆಯ 15 ಸಾವಿರ ಶಿಕ್ಷಕರ ನೇಮಕಾತಿ ಕರಡು ಅಧಿಸೂಚನೆಯಲ್ಲಿ ಕನ್ನಡ ಶಿಕ್ಷಕರ ಹುದ್ದೆಗಳಿಗೆ ಅವಕಾಶ ಕಲ್ಪಿಸದಿರುವುದನ್ನು ಖಂಡಿಸಿದರು. ವಿಜ್ಞಾನ, ಗಣಿತ ಸೇರಿದಂತೆ ಎಲ್ಲ ವಿಷಯಗಳ ಶಿಕ್ಷಕರ ನೇಮಕಾತಿಗೆ ಇಂಗ್ಲಿಷ್ ಭಾಷಾ ಪ್ರಾವೀಣ್ಯತೆಯನ್ನು ಕಡ್ಡಾಯಗೊಳಿಸಿರುವುದನ್ನೂ ವಿರೋಧಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ವಿವೇಕ ಕುಲಕರ್ಣಿ, ಉಪಾಧ್ಯಕ್ಷ ಆನಂದ ಗೋಡಸೆ, ವಿಭಾಗ ಸಂಯೋಜಕ ಶ್ರೀರಂಗ ಪುರಾಣಿಕ, ಕಾರ್ಯದರ್ಶಿ ಸುಕಾಂತ ಕುಲಕರ್ಣಿ, ಸಹ ಕಾರ್ಯದರ್ಶಿ ಅನೀಲ ಬೆಳುಂಡಗಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 