ಹೈದರಾಬಾದ್ ವಿಮೋಚನಾ ದಿನ ಆಚರಣೆಗೆ ಆಗ್ರಹಿಸಿ ಶಾಸಕರಿಗೆ ಮನವಿ
Memorandum submitted to MLAs demanding the observance of Hyderabad Liberation Day.
ಹೈದರಾಬಾದ್ ವಿಮೋಚನಾ ದಿನ ಆಚರಣೆಗೆ ಆಗ್ರಹಿಸಿ ಶಾಸಕರಿಗೆ ಮನವಿ
ವಿಜಯಪುರ 12: ಹೈದರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಸೆಪ್ಟೆಂಬರ್ 17ರಂದು ಹೈದರಾಬಾದ್ ವಿಮೋಚನಾ ದಿನಾಚರಣೆ (ಕಲ್ಯಾಣ ಕರ್ನಾಟಕ ಉತ್ಸವ) ಆಚರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಸದಸ್ಯರು ಇಂದು ಜಿಲ್ಲೆಯ ವಿವಿಧ ಶಾಸಕರಿಗೆ ಮನವಿ ಸಲ್ಲಿಸಿದರು.
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಅವರಿಗೆ ಮನವಿ ಸಲ್ಲಿಸಲಾಯಿತು. ಹೈದರಾಬಾದ್ ವಿಮೋಚನಾ ಚಳವಳಿಯ ನೇತೃತ್ವ ವಹಿಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿಯ ಸ್ವಾಮಿ ರಾಮಾನಂದ ತೀರ್ಥರು ಸೇರಿದಂತೆ ಜಿಲ್ಲೆಯ ಸರ್ದಾರ ಡಾ. ಬಸವರಾಜ ನಾಗೂರು, ಸಿದ್ದಗೊಂಡಪ್ಪಗೌಡ ಪಾಟೀಲ ಹಾಗೂ ಈ ಭಾಗದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಹೈದರಾಬಾದ್ ಪ್ರಾಂತದ ವಿಮೋಚನೆಗಾಗಿ ಹೋರಾಡಿದ್ದಾರೆ. ಈ ಮಹಾನ್ ಚೇತನಗಳ ತ್ಯಾಗ, ಹೋರಾಟ ಮತ್ತು ದೇಶಭಕ್ತಿಯನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.
ಸೆಪ್ಟೆಂಬರ್ 17ರಂದು ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು. ಅದೇ ರೀತಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಆಡಳಿತದ ವತಿಯಿಂದ ಅಧಿಕೃತವಾಗಿ ವಿಮೋಚನಾ ದಿನಾಚರಣೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.
ಹೈದರಾಬಾದ್ ವಿಮೋಚನಾ ಚಳವಳಿಯಲ್ಲಿ ಹೋರಾಡಿದ ಜಿಲ್ಲೆಯ ಹೋರಾಟಗಾರರು ಹಾಗೂ ಅವರ ಕುಟುಂಬದವರನ್ನು ಗುರುತಿಸಿ ಜಿಲ್ಲಾಮಟ್ಟದಲ್ಲಿ ಸನ್ಮಾನಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ವಿಮೋಚನಾ ದಿನಾಚರಣೆ ಆಚರಿಸುವುದರ ಜೊತೆಗೆ ಹೈದರಾಬಾದ್ ವಿಮೋಚನಾ ಚಳವಳಿಯ ಕುರಿತು ಉಪನ್ಯಾಸ, ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅದೇ ರೀತಿ ಸಿಂದಗಿಯಲ್ಲಿರುವ ಶ್ರೀ ಸ್ವಾಮಿ ರಾಮಾನಂದ ತೀರ್ಥರ ಜನ್ಮಸ್ಮಾರಕದ ಮುಂದೆ ಸರ್ಕಾರದ ವತಿಯಿಂದಲೇ ಹೈದರಾಬಾದ್ ವಿಮೋಚನಾ ದಿನಾಚರಣೆ ನಡೆಸಿ, ವಿಮೋಚನಾ ಚಳವಳಿಯ ಪಿತಾಮಹರು ಹಾಗೂ ಹೋರಾಟಗಾರರಿಗೆ ಸರ್ಕಾರದ ವತಿಯಿಂದ ಗೌರವ ಸಲ್ಲಿಸಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಅನಿಲ ಇಕ್ಕಡೆ, ವಸಂತ ಭೈರಾಮಡಿ, ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 