ಕುರುಗೋಡಿನಲ್ಲಿ ಮುಟ್ಟಿನ ಕಪ್ ವಿತರಣೆ, ಜಾಗೃತಿ ಕಾರ್ಯಕ್ರಮ

ಕುರುಗೋಡಿನಲ್ಲಿ ಮುಟ್ಟಿನ ಕಪ್ ವಿತರಣೆ, ಜಾಗೃತಿ ಕಾರ್ಯಕ್ರಮ Menstrual cup distribution and awareness program in Kurugodu

ಲೋಕದರ್ಶನ ವರದಿ 

  ಬಳ್ಳಾರಿ, 19: ಕೇಂದ್ರ ಹಾಗೂ ರಾಜ್ಯ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರಿ​‍್ಬಎಸ್‌ಕೆ/ಆರ್‌ಕೆಎಸ್‌ಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ‘ಪ್ರೇರಣಾ ಮುಟ್ಟಿನ ಕಪ್‌’ ವಿತರಣೆ ಹಾಗೂ ಋತುಚಕ್ರದ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಲಾಯಿತು.  

ಕುರುಗೋಡು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕುರುಗೋಡು ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಋತುಚಕ್ರದ ನೈರ್ಮಲ್ಯ ಹಾಗೂ ಮುಟ್ಟಿನ ಕಪ್ ಬಳಕೆಯ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.  

ಮುಟ್ಟಿನ ಕಪ್ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಸಮುದಾಯ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿ, ಕಚೇರಿ ಅಧಿಕಾರಿಗಳು, ಶುಶ್ರೂಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಒಟ್ಟು 98 ಮುಟ್ಟಿನ ಕಪ್‌ಗಳನ್ನು ವಿತರಿಸಲಾಯಿತು.  

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಕೆಎಸ್‌ಕೆ ಸಂಯೋಜಕ ಕೆ.ಎನ್‌. ಮನೋಹರ್, ದಂತ ವೈದ್ಯಾಧಿಕಾರಿ ಡಾ. ಗಾಯತ್ರಿ, ನೇತ್ರಾಧಿಕಾರಿ ಜಿ. ಪಲ್ಲವಿ, ಹಿರಿಯ ಶುಶ್ರೂಷಣಾಧಿಕಾರಿ ಕೆ.ಬಿ. ಸರಸ್ವತಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಕೆ. ಮಂಜುನಾಥ್, ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಷಡಕ್ಷರಯ್ಯ ಮತ್ತು ಮಹೇಂದ್ರ ಕುಮಾರ್, ಪ್ರಭಾರಿ ಎಲ್‌ಎಚ್‌ವಿ ಕೆ. ನೀಲಾವತಿ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಡಿ. ಸುನೀತಾ, ರೇಣುಕಾ, ಗಿರಿಜಾ, ಜಯಶ್ರೀ ಸೇರಿದಂತೆ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.