ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಅಗತ್ಯ: ಕ್ಲಿನಿಕಲ್ ಸೈಕಾಲಜಿಸ್ಟ್‌ ಸಮರ್ಥ್‌ ವಲಿ

ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಅಗತ್ಯ: ಕ್ಲಿನಿಕಲ್ ಸೈಕಾಲಜಿಸ್ಟ್‌ ಸಮರ್ಥ್‌ ವಲಿ  Mental health awareness needed among high school students: Clinical Psychologist Samarth Vali

ಬಳ್ಳಾರಿ, 23: ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಕ್ಲಿನಿಕಲ್ ಸೈಕಾಲಜಿಸ್ಟ್‌ ಸಮರ್ಥ್‌ ವಲಿ ಹೇಳಿದರು.  ನಗರದ ಪೀಪಲ್ ಟ್ರೀ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜಿಸಿದ್ದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

ಪ್ರೌಢಶಾಲಾ ಹಂತವು ವಿದ್ಯಾರ್ಥಿಗಳ ಜೀವನದ ಮಹತ್ವದ ಘಟ್ಟವಾಗಿದ್ದು, ಈ ಅವಧಿಯಲ್ಲಿ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳು ವೇಗವಾಗಿ ನಡೆಯುತ್ತವೆ. ಪರೀಕ್ಷೆಯ ಒತ್ತಡ, ಸ್ನೇಹಿತರ ಪ್ರಭಾವ ಹಾಗೂ ಭವಿಷ್ಯದ ಬಗ್ಗೆ ಇರುವ ಆತಂಕದಿಂದ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.  

ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯವಾಗಿದ್ದು, ಕೋಪ, ದುಃಖ, ಭಯ, ಸಂತೋಷ ಮುಂತಾದ ಭಾವನೆಗಳು ಸಹಜ. ಅವುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವುದೇ ಉತ್ತಮ ಮಾನಸಿಕ ಆರೋಗ್ಯದ ಲಕ್ಷಣವಾಗಿದೆ ಎಂದರು.  

ವಿದ್ಯಾರ್ಥಿಗಳು ಎದುರಿಸುವ ಪ್ರಮುಖ ಸವಾಲುಗಳು  

ಸಿಪರೀಕ್ಷೆ ಮತ್ತು ಅಧ್ಯಯನದ ಒತ್ತಡ: ಅಂಕಗಳ ಚಿಂತೆ ಹಾಗೂ ಪೋಷಕರು, ಶಿಕ್ಷಕರ ನೀರೀಕ್ಷೆಗಳು.  

ಸಿಸ್ನೇಹಿತರ ಒತ್ತಡ: ಇತರರಂತೆ ಕಾಣಿಸಿಕೊಳ್ಳಬೇಕು ಅಥವಾ ಅವರ ನಿಯಮಗಳಿಗೆ ಹೊಂದಿಕೊಳ್ಳಬೇಕು ಎಂಬ ಒತ್ತಡ.  

ಸಿಸಾಮಾಜಿಕ ಮಾಧ್ಯಮದ ಪ್ರಭಾವ: ಇತರರ ಜೀವನದೊಂದಿಗೆ ತಮ್ಮನ್ನು ಹೋಲಿಸಿಕೊಂಡು ಬೇಸರಪಡುವುದು.  

ಸಿದೇಹದ ಬದಲಾವಣೆಗಳ ಆತಂಕ: ಹದಿಹರೆಯದಲ್ಲಿ ಆಗುವ ದೈಹಿಕ ಬದಲಾವಣೆಗಳ ಬಗ್ಗೆ ಕೀಳರಿಮೆ ಹೊಂದುವುದು.  

ಮಾನಸಿಕವಾಗಿ ಸದೃಢರಾಗಲು ಸಲಹೆಗಳು  

ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಸ್ನೇಹಿತರು, ಪೋಷಕರು ಅಥವಾ ಶಿಕ್ಷಕರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಬೇಕು. ಸರಿಯಾದ ನಿದ್ರೆ, ಪೌತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆ ವಿಭಿನ್ನವಾಗಿದ್ದು, ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳಬಾರದು. ನಿರಂತರ ಓದಿನ ನಡುವೆ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳಷ್ಟಿಕ ಆಹಾರ, ನಿಯಮಿತ ದೈಹಿಕ ಚಟುವಟಿಕೆ, ಯೋಗ ಹಾಗೂ ಆಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಸಲಹೆ ನೀಡಿದರು.  ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆ ವಿಭಿನ್ನವಾಗಿದ್ದು, ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳಬಾರದು. ನಿರಂತರ ಓದಿನ ನಡುವೆ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳುವುದರಿಂದ ಏಕಾಗ್ರತೆ ಹೆಚ್ಚುತ್ತದೆ ಎಂದರು.  

ಉಚಿತ ‘ಟೆಲಿ-ಮಾನಸ್‌’ ಸಹಾಯವಾಣಿ ಬಳಸಿ  

ಕರ್ನಾಟಕ ಸರ್ಕಾರವು ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿ-ಮಾನಸ್ (14416) ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಪರೀಕ್ಷಾ ಒತ್ತಡ, ಕುಟುಂಬ ಸಮಸ್ಯೆ, ಆತ್ಮಹತ್ಯೆ ಆಲೋಚನೆ, ಮಾದಕ ವ್ಯಸನ, ಸಂಬಂಧಗಳ ಸಮಸ್ಯೆ, ಜ್ಞಾಪಕ ಶಕ್ತಿ ಸಮಸ್ಯೆ ಸೇರಿದಂತೆ ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಈ ಸೇವೆಯನ್ನು ಬಳಸಿಕೊಳ್ಳಬಹುದು ಎಂದು ಅವರು ತಿಳಿಸಿದರು.  ಕಾರ್ಯಕ್ರಮದಲ್ಲಿ ಶಾಲೆಯ ಉಪಪ್ರಾಂಶುಪಾಲೆ ವೈಷ್ಣವಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಜಡಗಣ್ಣವರ, ಮಾನಸಿಕ ವಿಭಾಗದ ಸಮಾಜ ಕಾರ್ಯಕರ್ತ ಎಚ್‌. ಶಾಂತಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಶಿಕ್ಷಕರಾದ ಗಂಗಣ್ಣ, ಸುರೇಖಾ, ಸಂಧ್ಯಾ, ರಿಜ್ವಾನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.