ಲಾಕ್ ಡೌನ್ ವೇಳೆ ಮಾನಸಿಕ ಆರೋಗ್ಯ ಮುಖ್ಯ: ರಹಾನೆ
ಮುಂಬೈ, ಏ 3,ಕೊರೊನಾ ವೈರಸ್ ಸೋಂಕು ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರಗಳ ಕ್ರಮವನ್ನು ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯಾ ರಹಾನೆ, ಶ್ಲಾಘಿಸಿದ್ದು, ಲಾಕ್‌ಡೌನ್‌ನಂಥ ಕಠಿಣ ಸಂದರ್ಭಗಳಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಹ ಅತ್ಯಂತ ಮುಖ್ಯವಾದ ಕೆಲಸ ಎಂದು ಹೇಳಿದ್ದಾರೆ.
"ಲಾಕ್‌ಡೌನ್ ಸಮಯದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಕೂಡ ಅತಿ ಮುಖ್ಯ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ, ಬಿಎಂಸಿ ಮತ್ತು ಎಎಂಪಿ ಕಾರ್ಯ ಶ್ಲಾಘನೀಯ. ಜನರ ಮಾನಸಿಕ ಸ್ವಾಸ್ಥ್ಯಕ್ಕಾಗಿ ಅವರನ್ನು ಬೆಂಬಲಿಸಲು ಉಚಿತ ಸಹಾಯವಾಣಿಯನ್ನು ರಚಿಸಿರುವುದು ಅತ್ಯುತ್ತಮ ಕಾರ್ಯ," ಎಂದು ರಹಾನೆ ಸಹಾಯವಾಣಿ ಸಂಖ್ಯೆಯೊಂದಿಗೆ ಟ್ವೀಟ್ ಮಾಡಿದ್ದಾರೆ.ಕಳೆದ ಮಾರ್ಚ್ 24 ರಿಂದ ದೇಶವು ಲಾಕ್ ಡೌನ್ ಆಗಿದೆ ಮತ್ತು ಕ್ರಿಕೆಟಿಗರು ಸೇರಿದಂತೆ ದೇಶದ ಜನರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಒಂದು ವೇಳೆ ಕೊರೊನಾ ವೈರಸ್ ಮಾರಣಾಂತಿಕ ವೈರಸ್ ಇಲ್ಲವಾಗಿದ್ದಲ್ಲಿ ಈಗಾಗಲೇ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಟಗಾರರು ಬ್ಯೂಸಿಯಾಗುತ್ತಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 