ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ ಮುಖ್ಯ: ನವೀನ್ ಕುಮಾರ್

ಹೂವಿನ ಹಡಗಲಿ 19: ಮಾನಸಿಕ ಸಾಮರ್ಥ್ಯದ ಪ್ರಶ್ನೆಗಳಿಗೆ ಉತ್ತರಿಸಲು ಹೆಚ್ಚಿನ ಅಧ್ಯಯನ ಅವಶ್ಯಕ ಎಂದು ಹಗರಿಬೊಮ್ಮನಹಳ್ಳಿ ಪಿ. ಡಿ. ಒ. ನವೀನ್ ಕುಮಾರ್ ಆರ್ ಡಿ ಹೇಳಿದರು.

ಪಟ್ಟಣದ ಸಾರ್ವಜನಿಕ ಶಾಖಾ ಗ್ರಂಥಾಲಯದಲ್ಲಿ ಶನಿವಾರ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ ಎದುರಿಸುವ ವಿಷಯ ಕುರಿತು ಉಪನ್ಯಾಸ ನೀಡಿದರು. 

ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳ ಜೊತೆಗೆ ಮಾನಸಿಕ ಸಾಮರ್ಥ್ಯದ ವಿಷಯಗಳ ಬಗ್ಗೆ ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಗಳು ಇರುತ್ತವೆ. ಸರಿಯಾಗಿ ಯೋಚಿಸಿ ಸೂಕ್ತ ಉತ್ತರ ಗುರುತಿಸಿ ಬರೆಯಬೇಕು ಎಂದರು.ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳು ನಿತ್ಯ ಗ್ರಂಥಾಲಯಕ್ಕೆ ಭೇಟಿ ನೀಡಿ ಹೆಚ್ಚಿನ ಗ್ರಂಥಗಳ ನೆರವಿನಿಂದ ಸಿದ್ಧತೆ ನಡೆಸಬೇಕು. 

ದಿನಪತ್ರಿಕೆ ನಿಯತಕಾಲಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಹೇಳಿದರು.ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಹಲವು ವಿಷಯಗಳ ಮೇಲೆ ಇರುತ್ತದೆ. ಆದುದರಿಂದ ಎಲ್ಲಾ ವಿಷಯಗಳ ಕಡೆ ಗಮನ ಹರಿಸಿ ಅಧ್ಯಯನ ನಡೆಸಿದಾಗ ಯಶಸ್ಸು ಸಾಧ್ಯ ಎಂದು ತಿಳಿಸಿದರು.ಶಾಖಾ ಗ್ರಂಥಾಲಯಾಧಿಕಾರಿ ಮಂಜುನಾಥ ಬೋವಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯುವಕರು ಹೆಚ್ಚು ಇದರ ಪ್ರಯೋಜನ ಪಡೆಯಲು ತಿಳಿಸಿದರು.