ಜುಲೈ 12ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Merit Award Ceremony on July 12
ಗದಗ, ಜು.10: ಪಂಚಮಸಾಲಿ ಸಮಾಜದ ವತಿಯಿಂದ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜುಲೈ 12ರಂದು ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಂಚಮಸಾಲಿ ಸಮಾಜದ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಳಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹಾಗೂ ಅಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮಕ್ಷೇತ್ರ ಕೂಡಲಸಂಗಮದ ಶ್ರೀಗಳು ವಹಿಸಲಿದ್ದಾರೆ ಎಂದರು. ಕಾರ್ಯಕ್ರಮವನ್ನು ಶಾಸಕ ಸಿ.ಸಿ. ಪಾಟೀಲ ಉದ್ಘಾಟಿಸಲಿದ್ದು, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಸಚಿವ ಕಲಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಕೆಎನ್‌ಎಸ್‌ಎಸ್‌ಎಂ ಅಧ್ಯಕ್ಷ ಶಿವಲೀಲಾ ವಿನಯ ಕುಲಕರ್ಣಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಯ್ಯಪ್ಪ ಎಂ. ಅಂಗಳಿ ವಹಿಸಲಿದ್ದು, ಉದ್ಯಮಿಗಳು ವಿಜಯಕುಮಾರ ಗಡ್ಡಿ, ಮೋಹನ ಮಾಳಶೆಟ್ಟಿ, ಮಡಿವಾಳಪ್ಪ ಸಂಕದ, ಡಾ. ಸಂಗಮೇಶ ಕೊಳ್ಳಿಯವರ, ಉಮೇಶಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಮೇಶ ರೋಣದ, ಚಂದ್ರು ಪಾಟೀಲ, ಬಸವರಾಜ ಗಡ್ಡೆಪ್ಪನವರ್, ಕೆ.ವಿ. ಗದುಗಿನ, ರವಿ ಮಾನೇದ, ಕುಮಾರ ಗದುಗಿನ, ಸಂಗಮೇಶ ಗೊಂದಿ, ಮಂಜುನಾಥ ಬಾಣದ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 