ಹಿಂದೂ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಪ್ರತಿಭಾ ಪುರಸ್ಕಾರ
Merit Award from the Hindu Lingayat Panchamasali Community
ರಾಣೆಬೆನ್ನೂರು 17: ಹಿಂದೂ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಗಾಣೆಬೆನ್ನೂರು ನಗರ ಹಾಗೂ ಗ್ರಾಮೀಣ ಘಟಕ ಮತ್ತು ತಾಲೂಕು ಮಹಿಳಾ ಘಟಕದ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಾಜದ ಮುಖಂಡ ಸಿದ್ದಣ್ಣ ಚಿಕ್ಕಬಿದರಿ ಹೇಳಿದರು. ನಗರದ ಶ್ರೀ ಆದಿಶಕ್ತಿ ದೇವಸ್ಥಾನ ಸಮುದಾಯ ಭವನದಲ್ಲಿ ಆಗಸ್ಟ್ 2, 2026ರ ಭಾನುವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಶುಕ್ರವಾರ ಶ್ರೀಮತಿ ಭಾರತಿ ಜಂಬಿಗಿ ಅವರ ಗೃಹ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಕಳೆದ ಸಾಲಿನಂತೆ ಈ ಬಾರಿಯೂ ಸಮಾಜದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳನ್ನು ಮತ್ತಷ್ಟು ಪ್ರೋತ್ಸಾಹಿಸುವ ಉದ್ದೇಶದಿಂದ 2025-26ನೇ ಸಾಲಿನ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.
ಆಸಕ್ತ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಪ್ರತಿ, ಅಂಕಪಟ್ಟಿ, 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಸಮಾಜದ ಅಧ್ಯಕ್ಷರ ಶಿಫಾರಸು ಪತ್ರ ಹಾಗೂ ನಿವಾಸ ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಭಾರತೀಯ ಜಂಬಿಗಿ, ವೀರೇಶ ಮೊಟಗಿ, ವಿನೋದ ಜಂಬಿಗಿ, ಮುತ್ತುರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 