ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿ ಮಾಡಿ ಕೃಷ್ಣಾ ನದಿಗೆ ನೀರು ಹರಿಸಲು ಮನವಿ
Met the Maharashtra Chief Minister and requested the release of water into the Krishna River
ಸಂಬರಗಿ 17: ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಕೃಷ್ಣಾ ನದಿಯ ನೀರಿನ ಮಟ್ಟ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೋಳಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಶಾಸಕರು ಶೀಘ್ರದಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಕೃಷ್ಣಾ ನದಿಗೆ ನೀರು ಹರಿಸುವಂತೆ ಮನವಿ ಮಾಡಲಿದ್ದಾರೆ ಎಂದು ಅನಂತಪುರ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪೋಪಟ್ ನಿಕಂ ಹೇಳಿದರು.
ಮದಭಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಮಳೆ ಕೊರತೆಯಿಂದ ಕೃಷ್ಣಾ ನದಿಯ ನೀರಿನ ಮಟ್ಟ ಕುಸಿದಿದ್ದು, ಇದರ ಪರಿಣಾಮ ಬಸವೇಶ್ವರ ಎತ್ತಿನೀರಾವರಿ ಯೋಜನೆಗೆ ನೀರಿನ ಹರಿವು ಕಡಿಮೆಯಾಗಿದೆ. ಆದಾಗ್ಯೂ ರೈತರು ಆತಂಕ ಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಕಾಲುವೆಗೆ ನೀರು ಬಿಡುಗಡೆ ಮಾಡುವ ಮೂಲಕ ಬರಪೀಡಿತ ಪ್ರದೇಶಗಳ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಸಕ ರಾಜು ಕಾಗೆ ಅವರು ಈ ವಿಷಯದಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಆದ್ದರಿಂದ ರೈತರು ವಿಶ್ವಾಸ ಕಳೆದುಕೊಳ್ಳಬಾರದು. ಶೀಘ್ರದಲ್ಲೇ ಕಾಲುವೆಗೆ ನೀರು ಹರಿದು ರೈತರಿಗೆ ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಭೌಸಾಹೇಬ್ ಚವ್ಹಾಣ್, ಅಮೋಲ್ ಮೊಪ್ರೆ, ಅಶೋಕ್ ಮೋರೆ, ತಾನಾಜಿ ಜಗತಾಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 