ಮುಂಡಗೋಡಿನಲ್ಲಿ ಮಿಡ್ನೈಟ್ ಮರ್ಡರ್! ಹೋಟೆಲ್ ಒಳಗೇ ನುಗ್ಗಿ ಜಮೀರ್ ಹತ್ಯೆಗೈದ ಕಿರಾತಕರು!
Midnight Murder in Mundagode! The criminals broke into the hotel and murdered Jameer!
ಲೋಕದರ್ಶನ ವರದಿ
ಮುಂಡಗೋಡ 25: ಪಟ್ಟಣದ ಬಸ್ ನಿಲ್ದಾಣದ ಎದುರಿನ ಹೋಟೆಲ್ನಲ್ಲಿ ಶುಕ್ರವಾರ ತಡರಾತ್ರಿ ನಡೆದ ಕ್ರೂರ ಹತ್ಯೆ ಪ್ರಕರಣವು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ನೂರಾನಿಗಲ್ಲಿ ನಿವಾಸಿ ಜಮೀರ್ ಅಹ್ಮದ್ ದರ್ಗಾವಾಲೆ (38) ಅವರನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ. ಘಟನೆಯ ಸಂಕ್ಷಿಪ್ತ ವಿವರ: ಜಮೀರ್ ಅಹ್ಮದ್ ದರ್ಗಾವಾಲೆ ಅವರು ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೋಟೆಲ್ನಲ್ಲಿ ಇದ್ದಾಗ ನಾಲ್ವರು ಆರೋಪಿಗಳ ತಂಡ ಏಕಾಏಕಿ ಹೋಟೆಲ್ ಒಳಗೆ ನುಗ್ಗಿ ದಾಳಿ ನಡೆಸಿದರೆಂದು ತಿಳಿದುಬಂದಿದೆ. ಪೂರ್ವಯೋಜಿತ ಸಂಚಿನಂತೆ ಬಂದ ದುಷ್ಕರ್ಮಿಗಳು ಮರಣಾಂತಿಕ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಈ ಘಟನೆಯಿಂದ ಸ್ಥಳದಲ್ಲಿದ್ದ ಸಾರ್ವಜನಿಕರು ಭಯಭೀತರಾಗಿ ಚದರಿಕೊಂಡಿದ್ದಾರೆ. ಪೊಲೀಸರ ಪರೀಶೀಲನೆ: ಸುದ್ದಿ ತಿಳಿದ ಕೂಡಲೇ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ತನಿಖೆ ತೀವ್ರ: ಆರೋಪಿಗಳ ಬಂಧನಕ್ಕಾಗಿ ಮೂರು ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರೀಶೀಲನೆ ನಡೆಯುತ್ತಿದೆ. “ಘಟನೆಯಲ್ಲಿ ಭಾಗಿಯಾದವರನ್ನು ಶೀಘ್ರವೇ ಬಂಧಿಸಲಾಗುವುದು,” ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಿನ್ನೆಲೆ ಮಾಹಿತಿ: ಮೃತ ಜಮೀರ್ ಅಹ್ಮದ್ ದರ್ಗಾವಾಲೆ ವಿರುದ್ಧ ಬೆಟ್ಟಿಂಗ್ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆಯ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 