ಪ್ರಸಾದ್ ಅಬ್ಬಯ್ಯ ಜನ್ಮದಿನ ಅಂಗವಾಗಿ ಮಕ್ಕಳಿಗೆ ಹಾಲು-ಬ್ರೆಡ್ ವಿತರಣೆ
Milk and bread distributed to children on the occasion of Prasad Abbayya's birthday
ಲೋಕದರ್ಶನ ವರದಿ
ಹಾವೇರಿ, ಜು. 5: ಮುಂಬೈ ಕರ್ನಾಟಕದ ಶೋಷಿತ ಸಮುದಾಯಗಳ ನಾಯಕ ಹಾಗೂ ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಜನ್ಮದಿನದ ಅಂಗವಾಗಿ ನಗರದ ಇಜಾರಿ ಲಕಮಾಪುರದ ಜ್ಯೋತಿ ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಾಲು ಮತ್ತು ಬ್ರೆಡ್ ವಿತರಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಹಾವೇರಿಯ ಗೌತಮಿ ಮೌರ್ಯ ಬುದ್ಧವಿಹಾರದ ನಿಯೋಜಿತ ಪೂಜ್ಯ ಕಮಲರತ್ನ ಬಂತೆಜಿ ಮಾತನಾಡಿ, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅನಾಥರು, ವಯೋವೃದ್ಧರು ಹಾಗೂ ಬಡವರಿಗೆ ನಿರಂತರವಾಗಿ ನೆರವು ನೀಡುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ ಎಂದು ಶ್ಲಾಘಿಸಿದರು. ಅವರಿಗೆ ಉತ್ತಮ ಆರೋಗ್ಯ, ಆಯುಷ್ಯ ಹಾಗೂ ಇನ್ನಷ್ಟು ಉನ್ನತ ಸ್ಥಾನಮಾನ ದೊರೆಯಲಿ ಎಂದು ಹಾರೈಸಿದರು.
ಸಮಾಜಸೇವಕಿ ಎನ್.ಎನ್. ಗಾಳೆಮ್ಮ ಮಾತನಾಡಿ, ಪ್ರಸಾದ್ ಅಬ್ಬಯ್ಯ ಅವರು ತಮ್ಮ ವೈಯಕ್ತಿಕ ಸಂಪನ್ಮೂಲಗಳಿಂದ ಬಡ ಮತ್ತು ಶೋಷಿತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿದ್ದು, ಅವರ ಜನ್ಮದಿನವನ್ನು ಪ್ರತಿ ವರ್ಷ ಆಶ್ರಮ ಹಾಗೂ ವಿಶೇಷ ಶಾಲೆಗಳಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಟಿ.ವಿ. ತಳವಾರ, ರಮೇಶ್ ಚಿಂಚಳ್ಳಿ, ವಾಗೀಶ, ಕಾಂತೇಶ್ ಹೊಳೆಪ್ಪನವರ ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 