ಕೋಟ್ಯಾಧಿಪತಿ ಮಹದೇಶ್ವರ; ಹುಂಡಿಯಲ್ಲಿ 1.7 ಕೋಟಿ ರೂ. ಸಂಗ್ರಹ

ಚಾಮರಾಜನಗರ, ಜ 29, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಿನ್ನೆ ತಡರಾತ್ರಿವರೆಗೂ ಹುಂಡಿ ಎಣಿಕೆ ಕಾರ್ಯ ‌ನಡೆದಿದ್ದು,  ಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹವಾಗಿದೆ.ದೇಗುಲದ ಹುಂಡಿಯಲ್ಲಿ 1.71 ಕೋಟಿ ರೂ ಸಂಗ್ರಹವಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ‌ ಮಹದೇಶ್ವರ ಕೋಟ್ಯಾಧಿಪತಿಯಾಗಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಅಧಿಕೃತವಾಗಿ ಮಾಹಿತಿ ನೀಡಿರುವ ಪ್ರಕಾರ ದೇಗುಲದ ಹುಂಡಿಯಲ್ಲಿ 1,71,00,458 ನಗದು ಸೇರಿ 22 ಗ್ರಾಂ ಚಿನ್ನ, 1 ಕೆಜಿ 40 ಗ್ರಾಂ ಬೆಳ್ಳಿ ವಸ್ತುಗಳನ್ನು ಭಕ್ತರು ಕಾಣಿಕೆಯಾಗಿ ಮಹದೇಶ್ವರನಿಗೆ ಸಮರ್ಪಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 1,39,97,950 ರೂಪಾಯಿ ಸಂಗ್ರಹವಾಗಿತ್ತು.  ಕಳೆದ ವರ್ಷಕ್ಕಿಂತ ಪ್ರಸ್ತುತ  31 ಲಕ್ಷ ರೂಪಾಯಿ ದೇಣಿಗೆ ಸಂಗ್ರಹ ಹೆಚ್ಚಳಗೊಂಡಿದೆ ಎಂದು ತಿಳಿದು ಬಂದಿದೆ.