ಬೆಳಗಾವಿ ಯಾತ್ರಿಗಳ ಸಾವಿಗೆ ಸಚಿವರ ಸಂತಾಪ
Minister's condolence over death of Belgaum pilgrims
ಬೆಳಗಾವಿ 29:ಉತ್ತರಪ್ರದೇಶದ ಪ್ರಯಾಗ್ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಂಬನಿ ಮಿಡಿದಿದ್ದಾರೆ.
ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರಗುಣ ಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ರಾಜ್ಯದ ಇನ್ನು ಕೆಲವು ಜನಗಾಯಗೊಂಡಿರುವ ಮಾಹಿತಿಯಿದ್ದು, ಎಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆ ತರಲು ರಾಜ್ಯಸರ್ಕಾರ ಅಧಿಕಾರಿಗಳನ್ನುನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 