ಸಚಿವ ಬಿ. ನಾಗೇಂದ್ರ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣ

ಸಚಿವ ಬಿ. ನಾಗೇಂದ್ರ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣ Minister B. Nagendra pays tribute to the statue of Gandhiji; hoists a 150-foot-tall flag

ಬಳ್ಳಾರಿ 16: ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ಅವರು, 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸುವುದರ ಜೊತೆಗೆ ಬೃಹತ್ ಧ್ವಜಾರೋಹಣ ನೆರವೇರಿಸಿದರು.ಡಾ. ರಾಜ್‌ಕುಮಾರ್ ಉದ್ಯಾನವನದಲ್ಲಿ ನಮನ: ನಗರದ ಪ್ರಮುಖ ಆಕರ್ಷಣೆಯಾದ ಡಾ. ರಾಜ್‌ಕುಮಾರ್ ಉದ್ಯಾನವನಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರೆ​‍್ಣ ಮಾಡಿ ಪುಷ್ಪ ನಮನ ಸಲ್ಲಿಸಿದರು. 

150 ಅಡಿ ಎತ್ತರದ ಧ್ವಜಾರೋಹಣ: ಬಳಿಕ ನಗರದ ಹೆಚ್‌.ಆರ್‌. ಗವಿಯಪ್ಪ ವೃತ್ತದಲ್ಲಿನ 150 ಅಡಿ ಎತ್ತರದ ಬೃಹತ್ ಸ್ತಂಭದಲ್ಲಿ ವಿಧ್ಯುಕ್ತವಾಗಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಬೃಹತ್ ಧ್ವಜವು ಗಗನದೆತ್ತರಕ್ಕೆ ಹಾರಾಡಿದ ಕ್ಷಣಕ್ಕೆ ಉಪಸ್ಥಿತರಿದ್ದ ಗಣ್ಯರು ಹಾಗೂ ನಾಗರಿಕರು ಸಾಕ್ಷಿಯಾದರು. ಬಿಎಂಸಿಆರ್‌ಸಿ ಮುಂಭಾಗದಲ್ಲಿ ಪುಷ್ಪಾರ್ಚನೆ: ನಂತರ, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮುಂಭಾಗದಲ್ಲಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೂ ಪುಷ್ಪಾರ್ಚನೆ ಮಾಡಿ ಗೌರವ ಸಮರ​‍್ಿಸಿದರು. 

ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್‌.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ,

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್‌.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್‌. ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ- ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.