ಸೆ.29 ರಂದು ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಬಳ್ಳಾರಿಗೆ ಆಗಮನ
Minister B.Z. Zameer Ahmed Khan arrives in Ballari on September 29th
ಬಳ್ಳಾರಿ 28 : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೆ.29 ರಂದು ಹೊಸಪೇಟೆಯಿಂದ ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10.30 ಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬಳಿಕ ಮಧ್ಯಾಹ್ನ 12.30 ರಿಂದ 01.30 ಗಂಟೆಯವರೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಏರಿ್ಡಸಿರುವ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ನಂತರ ಮಧಾಹ್ನ 02.15 ರಿಂದ ಸಂಜೆ 06 ಗಂಟೆಯವರೆಗೆ ನಗರದ ಜಿಪಂ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆ ನಡೆಸುವರು.
ಬಳಿಕ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು.ಸೆ.30 ರಂದು ಮಧ್ಯಾಹ್ನ 03 ಗಂಟೆಗೆ ಹೊಸಪೇಟೆಯಿಂದ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ತಿಳಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 