ಸಚಿವ ಬಸವರಾಜ ರಾಯರೆಡ್ಡಿಗೆ ಅಮ್ಜದ್ ಪಟೇಲ್ ಅಭಿಮಾನಿ ಬಳಗದಿಂದ ಸನ್ಮಾನ
Minister Basavaraj Rayareddy felicitated by the Amjad Patel Fans' Association
ಕೊಪ್ಪಳ, ಆ.7: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜಿಲ್ಲೆಯ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಗುರುವಾರ ಕೊಪ್ಪಳದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಮುಖ ಮುಖಂಡ ಅಮ್ಜದ್ ಪಟೇಲ್ ಅವರ ನೇತೃತ್ವದ ಅಭಿಮಾನಿ ಬಳಗದಿಂದ ಆತ್ಮೀಯ ಸನ್ಮಾನ ನಡೆಯಿತು.
ಸಚಿವರಾದ ಬಳಿಕ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಗೆ ಆಗಮಿಸಿದ ಬಸವರಾಜ ರಾಯರೆಡ್ಡಿ ಅವರನ್ನು ಅಭಿನಂದಿಸಿದ ಅಮ್ಜದ್ ಪಟೇಲ್ ಹಾಗೂ ಅವರ ಅಭಿಮಾನಿಗಳು ಪುಷ್ಪಗುಚ್ಛ ನೀಡಿ ಗೌರವಿಸಿ ಶುಭಾಶಯ ಕೋರಿದರು.
ಈ ವೇಳೆ ಮಾತನಾಡಿದ ಅಮ್ಜದ್ ಪಟೇಲ್, ಜಿಲ್ಲಾ ಕೇಂದ್ರವಾದ ಕೊಪ್ಪಳ ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಒದಗಿಸಬೇಕು. ಜಿಲ್ಲೆಯ ಜನರ ಬಹುಕಾಲದ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಸಚಿವರಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 