ರೂ.34 ಕೋಟಿ ವೆಚ್ಚದಲ್ಲಿ ಬಾಡ ಹಾಗೂ ಗುಡ್ಡದ ಚನ್ನಾಪುರ ಅಭಿವೃದ್ಧಿಗೆ ಕ್ರಮ: ಸಚಿವ ಬೈರೇಗೌಡ
Minister Byre Gowda takes steps to develop Bada and Gudda Channapur at a cost of Rs. 34 crore
ಶಿಗ್ಗಾವಿ 11: ಕಾಗಿನೆಲೆ ಪ್ರಾಧಿಕಾರದ ವ್ಯಾಪ್ತಿಗೆ ಬಾಡ ಹಾಗೂ ಗುಡ್ಡದ ಚನ್ನಾಪುರ ರೂ.34 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬೆಳಗಾವಿ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಫಠಾಣ್ ಯಾಸೀರ್ ಅಹ್ಮದ್ ಖಾನ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ ಸುವರ್ಣ ವಿಧಾನಸೌಧ ಕಾಗಿನೆಲೆ ಪ್ರಾಧಿಕಾರದ ವ್ಯಾಪ್ತಿಗೆ ಕನಕದಾಸರ ಹುಟ್ಟೂರು ಬಾಡ ಹಾಗೂ ಗುಡ್ಡದ ಚೆನ್ನಾಪುರ ಗ್ರಾಮಗಳನ್ನು ಸೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ದೇಶನ ನೀಡಿದ್ದಾರೆ. ಈಗಾಗಲೇ ಕಾಗಿನೆಲೆ ಪ್ರಾಧಿಕಾರದ ಅಭಿವೃದ್ಧಿಗೆ ರೂ.34 ಕೋಟಿ ಬಿಡುಗಡೆ ಮಾಡಿದ್ದು, ಈ ಅನುದಾನವನ್ನು ಬಳಿಸಿ ಬಾಡ ಹಾಗೂ ಗುಡ್ಡದ ಚೆನ್ನಾಪುರ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.
2016ರಲ್ಲಿ ಕಾಗಿನೆಲೆ ಪ್ರಾಧಿಕಾರ ಸ್ಥಾಪನೆ ಮಾಡಲಾಗಿತ್ತು. ಅಂದೇ ಬಾಡ ಹಾಗೂ ಗುಡ್ಡದ ಚೆನ್ನಾಪುರ ಗ್ರಾಮಗಳು ಪ್ರಾಧಿಕಾರದ ವ್ಯಾಪ್ತಿಯಲ್ಲಿದ್ದವು. ಸರ್ಕಾರ ಕಾಗಿನೆಲೆ ಅಭಿವೃದ್ಧಿಗೆ ಬದ್ಧವಿದೆ ಎಂದರು. ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಕಾಗಿನೆಲೆ ಅಭಿವೃದ್ಧಿಗೆ ರೂ.34 ಕೋಟಿ ಬಿಡುಗಡೆ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಜಾನಪದ ವಿಶ್ವವಿದ್ಯಾನಿಲಯಕ್ಕೆ ಕನಕದಾಸರ ಹೆಸರು ಇಡುವಂತೆ ಇದೇ ಸಂದರ್ಭದಲ್ಲಿ ಶಾಸಕ ಪಠಾಣ್ ಯಾಸೀರ್ ಆಹ್ಮದ್ ಖಾನ್ ಮನವಿ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 