ಅಂತೂರ-ಬೆಂತೂರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಡಾ. ಎಚ್.ಕೆ. ಪಾಟೀಲ ಚಾಲನೆ
Minister Dr. H.K. Patil launches development works in Antura-Bentura
ಗದಗ 17: ಅಂತೂರ-ಬೆಂತೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರೂ ಆಗಿರುವ ಡಾ. ಎಚ್.ಕೆ. ಪಾಟೀಲರು ಅಧಿಕೃತವಾಗಿ ಚಾಲನೆ ನೀಡಿದರು.ಸಚಿವ ಡಾ. ಎಚ್.ಕೆ. ಪಾಟೀಲ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಎಲ್ಲ ಅಭಿವೃದ್ಧಿ ಕಾರ್ಯಗಳಿಗೂ ಹಣ ಮಾತ್ರವೇ ಸಾಕಾಗುವುದಿಲ್ಲ, ಅದರ ಜೊತೆಗೆ ಪ್ರಾಮಾಣಿಕತೆ ಅತ್ಯಂತ ಅಗತ್ಯವಾಗಿದೆ. ಪ್ರಾಮಾಣಿಕವಾಗಿ ಕೈಗೊಂಡ ಕೆಲಸಗಳೇ ಸಮಾಜಕ್ಕೆ ಶಾಶ್ವತ ಫಲ ನೀಡುತ್ತವೆ.
ಈ ನಿಟ್ಟಿನಲ್ಲಿ ಇಲ್ಲಿನ ಅಭಿವೃದ್ಧಿ ಕಾರ್ಯಗಳು ನಿಜಕ್ಕೂ ಅಭಿನಂದನಾರ್ಹವಾಗಿವೆ ಎಂದು ಹೇಳಿದರು.ಇಲ್ಲಿವರೆಗೂ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೆಗಾ)ಯನ್ನು ಸದ್ಭಳಕೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಈ ಕಾನೂನನ್ನು ರದ್ದುಪಡಿಸಿರುವುದು ಗ್ರಾಮೀಣ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಈ ಕಾನೂನು ಪುನಃ ಜಾರಿಯಾಗಬೇಕೆಂದು ನಾನು ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ಒತ್ತಿ ಹೇಳಿದ ಸಚಿವರು, ಪಕ್ಕದ ಒಂದು ಗ್ರಾಮದಲ್ಲಿ 15 ವರ್ಷಗಳ ಹಿಂದೆಯೇ ಡಿಜಿಟಲ್ ಗ್ರಂಥಾಲಯ ಆರಂಭವಾಗಿದ್ದು, ಇಂದು ಅದು ಎಲ್ಲ ಗ್ರಾಮಗಳಿಗೂ ವಿಸ್ತರಿಸಿರುವುದು ಸಂತಸದ ಸಂಗತಿ ಎಂದರು.
ರೈತರು ಸಹ ಡಿಜಿಟಲ್ ಗ್ರಂಥಾಲಯಗಳನ್ನು ಬಳಸಿಕೊಂಡು ಹೊಸ ತಂತ್ರಜ್ಞಾನ, ಮಾಹಿತಿ ಮತ್ತು ಜ್ಞಾನವನ್ನು ಪಡೆದುಕೊಳ್ಳಬೇಕು. ಇದರಿಂದ ರೈತ ಸಮುದಾಯದಲ್ಲಿ ತಂತ್ರಜ್ಞಾನ ಅರಿವು ಹೆಚ್ಚಾಗಿ ಕೃಷಿ ಕ್ಷೇತ್ರದಲ್ಲೂ ಹೊಸ ಬದಲಾವಣೆ ಸಾಧ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಅವರು ಹಾರೈಸಿದರು.ಗ್ರಾಮದಲ್ಲಿ ಐಅರ್ ಡಿ ಎಫ್ ಯೋಜನೆಯಡಿ ನಿರ್ಮಾಣವಾಗ ಅಂಗನವಾಡಿ ಕೇಂದ್ರ, ಡಿಜಿಟಲ್ ಗ್ರಂಥಾಲಯ, ಬಸ್ ತಂಗುದಾಣ, ಎಸ್ ಡಿ ಪಿ ಯೋಜನೆಯಡಿ ನಿರ್ಮಾಣವಾದ ಅಂಗನವಾಡಿ ಹಾಗೂ ಜಿಮ್ ಗಳನ್ನು ಶುಕ್ರವಾರ ಲೋಕಾರೆ್ಣ ಮಾಡಲಾಗಿದೆ.
ಇವುಗಳ ಸದ್ಬಳಕೆಯನ್ನು ಗ್ರಾಮದ ಸಾರ್ವಜನಿಕರು ಮಾಡಿಕೊಳ್ಳಲು ತಿಳಿಸಿದರು.ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಮೂಲಸೌಕರ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುತ್ತಿದೆ ಎಂದರು. ರಸ್ತೆ, ಕುಡಿಯುವ ನೀರು, ಒಳಚರಂಡಿ, ಸಾರ್ವಜನಿಕ ಕಟ್ಟಡಗಳು ಸೇರಿದಂತೆ ಜನೋಪಯೋಗಿ ಯೋಜನೆಗಳ ಮೂಲಕ ಗ್ರಾಮಗಳ ಜೀವನಮಟ್ಟವನ್ನು ಸುಧಾರಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.ಅಂತೂರ-ಬೆಂತೂರ ಗ್ರಾಮದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದು, ಅವುಗಳು ಪೂರ್ಣಗೊಂಡ ನಂತರ ಜನರಿಗೆ ಅಗತ್ಯ ಮೂಲ ಸೌಕರ್ಯಗಳು ಲಭ್ಯವಾಗಲಿವೆ ಎಂದು ಸಚಿವ ಎಚ್ ಕೆ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ ಪಂ ಅಧ್ಯಕ್ಷ ಪ್ರಕಾಶಗೌಡ ಪಾಟೀಲ ವಹಿಸಿದ್ದರು, ಉಪಾಧ್ಯಕ್ಷೆ ನೀಲವ್ವ ಬಡ್ನಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಕುರ್ತಕೋಟಿ ಗ್ರಾ ಪಂ ಅಧ್ಯಕ್ಷ ಅಪ್ಪಣ್ಣ ಇನಾಮತಿ, ರವಿ ಮೂಲಿಮನಿ, ಎನ್ ಜೆ ಕುರಹಟ್ಟಿ, ಶಿವಪ್ರಕಾಶ ಮಣಕವಾಡ, ನಾರಾಯಣರಾವ್ ವಶೇಕರ್, ಕನಕಪ್ಪ ಹಾದಿಮನಿ, ಹೆಚ್ ಬಿ. ಹದಲಿ,ಕೆ ಎಲ್ ಪೂಜಾರ, ವಿನೋದ ಹೂಗಾರ, ಹೈದರ ಅಲಿ ನದಾಫ, ಶರಣಪ್ಪ, ಯಲ್ಲಪ್ಪ ಕುರಹಟ್ಟಿ, ಅಂದಾನಪ್ಪ ಚಿಂಚಲಿ, ರಾಘವೇಂದ್ರ ಓಶೇಕರ, ಪ್ರವೀಣ ಚಾಕಲಬ್ಬಿ, ನಿಂಗಪ್ಪ ಅಮ್ಮಾಗಿ, ಮುದುಕಪ್ಪ ಮನಕವಾಡ, ಪೀರಸಾಬ ನದಾಫ, ವೈ ಡಿ ತಳವಾರ, ಜಿ ಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 