ಬೆಟಗೇರಿಯಲ್ಲಿ 1 ಕೋಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್.ಕೆ. ಪಾಟೀಲ ಚಾಲನೆನೂತನ ಅಂಗನವಾಡಿ ಉದ್ಘಾಟನೆ
Minister H.K. Patil launches Rs 1 crore road development work in Betageri, inaugurates new Anganwadi
ಗದಗ, 26: ಗದಗ-ಬೆಟಗೇರಿ ನಗರದ ವಾರ್ಡ್ ನಂ. 06ರ ಬೆಟಗೇರಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ?1 ಕೋಟಿ ವೆಚ್ಚದ ಸಿ.ಸಿ ರಸ್ತೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಶ್ರೀ ಚನ್ನಪ್ಪಗೌಡರ ಅವರ ಮನೆಯ ಸಮೀಪ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಚಿವರು ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಸಾರ್ವಜನಿಕ ಬಳಕೆಗೆ ಸಮರ್ಿಸಿದರು.
ಬಳಿಕ ಮಾತನಾಡಿದ ಅವರು, ನಗರದ ಸಮಗ್ರ ಅಭಿವೃದ್ಧಿಗೆ ರಸ್ತೆ, ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳ ವಿಸ್ತರಣೆ ಅತ್ಯಗತ್ಯವಾಗಿದ್ದು, ಸರ್ಕಾರ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.ಅಂಗನವಾಡಿ ಕಟ್ಟಡ ಉದ್ಘಾಟನೆ ಬಳಿಕ ಮಾತನಾಡಿದ ಸಚಿವ ಎಚ್ ಕೆ ಪಾಟೀಲ ಅವರು, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. “ಮಕ್ಕಳ ಪ್ರಾಥಮಿಕ ಶಿಕ್ಷಣ, ಪೌಷ್ಠಿಕ ಆಹಾರ ಹಾಗೂ ಸಂಸ್ಕಾರಗಳ ಮೊದಲ ಹಂತ ಅಂಗನವಾಡಿಯಲ್ಲಿಯೇ ಆರಂಭವಾಗುತ್ತದೆ. ಉತ್ತಮ ಸೌಲಭ್ಯಗಳೊಂದಿಗೆ ಅಂಗನವಾಡಿಗಳು ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ಒದಗಿಸಬೇಕು,” ಎಂದು ಹೇಳಿದರು. ಹಕ್ಕು ಪತ್ರ ವಿತರಣೆ :ಈ ಸಂದರ್ಭದಲ್ಲಿ ವಾರ್ಡ್ನ ಮೂವತ್ತೈದು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.
ನೀಲವ್ವ ಪರಸಪ್ಪ ಬಜಂತ್ರಿ, ರೇಖವ್ವ ರಾಜಪ್ಪ ಬಜಂತ್ರಿ, ಅನಂತ ಬೋಜಪ್ಪ ಬಜಂತ್ರಿ, ಯಮನವ್ವ ಬಜಂತ್ರಿ, ಮಾಯವ್ವ ಬಜಂತ್ರಿ, ಗವಿಸಿದ್ದಪ್ಪ ಬಜಂತ್ರಿ ಸೇರಿದಂತೆ ಹಲವರು ಸಚಿವರಿಂದ ಹಕ್ಕುಪತ್ರ ಸ್ವೀಕರಿಸಿದರು. ಹಕ್ಕುಪತ್ರ ವಿತರಣೆಯಿಂದ ಫಲಾನುಭವಿಗಳಲ್ಲಿ ಸಂತಸ ಮನೆಮಾಡಿತ್ತು.ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಸಭಾ ಸದಸ್ಯೆ ಲಕ್ಷ್ಮವ್ವ ಬಜಂತ್ರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ ಸೇರಿದಂತೆ ಹಲವು ಗಣ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 