ಸಾಹಸಿ ಚಟುವಟಿಕೆ ಕ್ರೀಡೆಗಳಿಗೆ ಸಚಿವ ಎಚ್.ಕೆ.ಪಾಟೀಲ ಚಾಲನೆ
Minister H.K. Patil launches adventure sports
ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಮನರಂಜನಾ ಕ್ರೀಡೆಗಳು ಆರಂಭ
ಗದಗ ನವೆಂಬರ್ 4: ನಗರದ ಬಿಂಕದಕಟ್ಟಿ ಮೃಗಾಲಯದ ಹತ್ತಿರದಲ್ಲಿರುವ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಬರುವವರು ಇನ್ನು ಮುಂದೆ ಸಾಹಸಿ ಕ್ರೀಡೆಗಳನ್ನು ಆಡಿ ಮನರಂಜನೆ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.
ಸೋಮವಾರದಂದು ಗದಗ ಅರಣ್ಯ ಪ್ರಾದೇಶಿಕ ವಿಭಾಗ ಹಾಗೂ ಗದಗ ಅರಣ್ಯ ಪ್ರಾದೇಶಿಕ ವಲಯ ಸಹಯೋಗದಲ್ಲಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಪಿಕಲ್ ಬಾಲ್ ಮೈದಾನ, ಆರ್ಚರಿ ಕ್ರೀಡಾಂಗಣ, ಚಿಟ್ಟೆ ಪಾರ್ಕ ಹಾಗೂ ಸಾಹಸಿ ಚಟುವಟಿಕೆ ಕ್ರೀಡಾಂಗಣಕ್ಕೆ ಸಚಿವ ಎಚ್.ಕೆ.ಪಾಟೀಲ ಅವರು ಚಾಲನೆ ನೀಡಿ ಮಾತನಾಡಿದರು.
ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ಒಂದು ಪ್ರವಾಸಿ ತಾಣವಾಗಿದೆ. ಒಂದು ದಿನದ ಪಿಕ್‌ನಿಕ್‌ಗಾಗಿ ಸಾಕಷ್ಟು ಶಾಲಾ ಮಕ್ಕಳು ಭೇಟಿ ನೀಡುತ್ತಿದ್ದಾರೆ. ಇನ್ನು ಮುಂದೆ ಸಸ್ಯೋದ್ಯಾನ ವೀಕ್ಷಣೆ ಜೊತೆಗೆ ಪಿಕಲ್ ಬಾಲ್, ಆರ್ಚರಿ ಕ್ರೀಡಾಂಗಣದಲ್ಲಿ ಬಿಲ್ಲು ಕ್ರೀಡೆ, ಚಿಟ್ಟೆ ಪಾರ್ಕನಲ್ಲಿ ಪತಂಗಗಳ ಕಲರವ, ಸಾಹಸ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಸಂಪೂರ್ಣ ಮನರಂಜನೆ ದೊರೆಯುವಂತೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲಾಗಿದೆ. ಅವುಗಳ ಸದ್ಭಳಕೆಯನ್ನುಇಲ್ಲಿ ಬರುವ ಮಕ್ಕಳು ಹಾಗೂ ಸಾರ್ವಜನಿಕರು ಪಡೆಯಬಹುದಾಗಿದೆ ಎಂದರು.
ಈಗಾಗಲೇ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಹಲವಾರು ಮನರಂಜನಾ ಚಟುವಟಿಕೆಗಳಿಗೆ ಅವಕಾಶ ಒದಗಿಸಲಾಗಿದೆ. ಜಿಪ್‌ಲೈನ್ ಮೂಲಕ ಸಾಹಸ ಪ್ರಿಯರಿಗೆ ಮುದ ನೀಡುವಂತೆ ಸಸ್ಯೋದ್ಯಾನ ಅಭಿವೃದ್ಧಿ ಪಡಿಸಲಾಗಿದೆ ಅಲ್ಲದೇ ಅರಣ್ಯ ಹುತಾತ್ಮರ ಸ್ಮಾರಕ ಸಹ ಅಂದವಾಗಿ ನಿರ್ಮಿಸಲಾಗಿದೆ. ಇವೆಲ್ಲವುಗಳು ಆಗಮಿಸುವ ಪ್ರವಾಸಿಗರಿಗೆ ಮುದ ನೀಡಲಿವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು ಅವೆಲ್ಲವುಗಳನ್ನು ಸಮರ್ಕವಾಗಿ ಬಳಕೆ ಮಾಡುವ ಮೂಲಕ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಸೆಳೆಯುವ ಪ್ರಯತ್ನ ನಿರಂತರವಾಗಿ ಸಾಗಿದೆ. ಜಿಲ್ಲೆ ಐತಿಹಾಸಿಕವಾಗಿ, ಸಾಹಿತ್ಯಕವಾಗಿ, ನೈಸರ್ಗಿಕವಾಗಿ ಸಮೃದ್ಧವಾಗಿದ್ದು ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಭೇಟಿ ನೀಡುವ ಭರವಸೆಯಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ, ಬಿಂಕದಕಟ್ಟಿ ಗ್ರಾ.ಪಂ. ಅಧ್ಯಕ್ಷ ನಿಂಗಪ್ಪ ಪರ್ಪನವರ, ಉಪಾಧ್ಯಕ್ಷ ದ್ಯಾಮವ್ವ ಆರಟ್ಟಿ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಮಹಾಂತೇಶ ಪೊಲೀಸ ಪಾಟೀಲ, ವೀರೇಂದ್ರ ಮರಿಬಸಣ್ಣವರ ಸೇರಿದಂತೆ ಹಿರಿಯರು, ಗಣ್ಯರು, ಇತರರು ಹಾಜರಿದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 