ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆ-ಪ್ರಗತಿ ಪರೀಶೀಲನೆ ತ್ವರಿತ ಕ್ರಮಕ್ಕೆ ಸಚಿವ ಎಚ್.ಕೆ.ಪಾಟೀಲ ಸೂಚನೆ
Minister H.K.Patila instructs for speedy action on Savadatti Ellamma Constituency Comprehensive Deve
ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆ-ಪ್ರಗತಿ ಪರೀಶೀಲನೆ ತ್ವರಿತ ಕ್ರಮಕ್ಕೆ ಸಚಿವ ಎಚ್.ಕೆ.ಪಾಟೀಲ ಸೂಚನೆ
ಬೆಳಗಾವಿ, ಜೂನ್ 6 : ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಸುಪ್ರಸಿದ್ಧ ಸುಕ್ಷೇತ್ರ ಸವದತ್ತಿ ಎಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸವದತ್ತಿ ಎಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಶುಕ್ರವಾರ(ಜೂ.6) ಪ್ರವಾಸಿಮಂದಿರದಲ್ಲಿ ನಡೆದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂರು ಕೋಟಿ ರೂಪಾಯಿ ವಿಶೇಷ ಅನುದಾನ ಹಾಗೂ ಪ್ರಸಾದ ಯೋಜನೆಯಡಿ ನೀಡಲಾಗಿರುವ 18.37 ಕೋಟಿ ರೂಪಾಯಿ ಅನುದಾನದಲ್ಲಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದರು.ಪ್ರಸಾದ ಯೋಜನೆಯಡಿ ಎರಡು ಬಹುಪಯೋಗಿ ಸಭಾಂಗಣಗಳು, ಶೌಚಾಲಯ, ಸ್ನಾನಗೃಹಗಳು, ಮಾಹಿತಿ ಕೇಂದ್ರಗಳು, ಕ್ಯಾಂಟೀನ್, ಪ್ರಾಥಮಿಕ ಚಿಕಿತ್ಸಾ ಕೇಂದ್ರ, ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಡಿಜಿಟಲ್ ಮಾಹಿತಿ ಫಲಕಗಳ ಅಳವಡಿಕೆ ಕುರಿತು ಚರ್ಚಿಸಿದರು.
ಅದೇ ರೀತಿ ನೂರು ಕೋಟಿ ರೂಪಾಯಿ ವಿಶೇಷ ಸಹಾಯಾನುದಾನ ಯೋಜನೆಯಡಿ ಭಕ್ತರಿಗೆ ಸರದಿ ಕಾಂಪ್ಲೆಕ್ಸ, ಪಾರ್ಕಿಂಗ್ ವ್ಯವಸ್ಥೆ, ಅನ್ಮ ದಾಸೋಹ ಭವನ, ವ್ಯಾಪಾರಿ ಮಳಿಗೆ, ಆಡಳಿತ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು.ಮಾಸ್ಟರ್ ಪ್ಲ್ಯಾನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸವದತ್ತಿಯಲ್ಲಿ ಜರುಗಿದ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯಗಳ ಅನುಸಾರ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಒಟ್ಟಾರೆಯಾಗಿ ದೇವಿ ದರ್ಶನ, ಊಟೋಪಹಾರ, ಪಾರ್ಕಿಂಗ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಭಕ್ತಾಧಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರು.ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಶ್ರೀ ರೇಣುಕಾ ಎಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧಿಕಾರಿಗಳಾದ ಗೀತಾ ಕೌಲಗಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಸೌಮ್ಯಾ ಬಾಪಟ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 