ಡಬ್ಲ್ಯುಎಚ್ಒ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಸಚಿವ ಹರ್ಷ್ ವರ್ಧನ್

ನವದೆಹಲಿ, ಮೇ 22 ,ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರು  ಇಂದು ಅಧಿಕಾರ ಸ್ವೀಕರಿಸಿದರು .
ಮಂಡಳಿಯ 147 ನೇ ಅಧಿವೇಶನದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷ್ ವರ್ಧನ್ ಅವರು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷರಾಗಿ  ಜಪಾನಿನ  ಡಾ.ಹಿರೋಕಿ ನಕಟಾನಿ ಅವರಿಂದ  ಅಧಿಕಾರ ಸ್ವೀಕರಿಸಿದರು.