ಸಚಿವೆ ಹೆಬ್ಬಾಳಕರ ಕಾರು ಅಪಘಾತ : ಲಕ್ಷ್ಮೀ, ಚನ್ನರಾಜ ಆಸ್ಪತ್ರೆಗೆ ದಾಖಲು

Minister Hebbalaka's car accident: Lakshmi, Channaraja admitted to hospital

ಬೆಳಗಾವಿ : ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರು ಸಂಚರಿಸುತ್ತಿದ್ದ ಕಾರು ಭೀಕರವಾಗಿ ಅಪಘಾತಗೊಂಡಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲ್ಲೂಕಿನ  ಅಂಬಡಗಟ್ಟಿ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.


   ಈ ಘಟನೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಸಹೋದರ ವಿಧಾನ ಪರಿಷತ್ ಸದಸ್ಯ ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ.

   ಈ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

  ಬಳಿಕ ಚಾಲಕನ ನಿಯಂತ್ರಣ ತಪ್ಪಿ ಸಚಿವೆಯ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. 

ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯ, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯವಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

   ಬೆಳಗಿನ ಜಾವ 6 ಗಂಟೆಗೆ ನಡೆದಿರುವ ಘಟನೆ. ಸಿಎಲ್ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ  ಮರಳುತ್ತಿದ್ದ ಲಕ್ಷ್ಮೀ ಹೆಬ್ಬಾಳಕರ್.

ಬೆಂಗಳೂರಿನಿಂದ ರಸ್ತೆ ಮೂಲಕ ಬರ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಹನವು ಅಪಘಾತವಾಗಿದೆ.