ಹಾಡಹಗಲೇ ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ
Minister Hebbalkar's son's car driver stabbed in broad daylight
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರನ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.
ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಗಣಪತ ಕಡೋಲಕರ ಎಂಬ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ. ಕೂಡಲೇ ಗಾಯಾಳು ಬಸವಂತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆಗೆ ಗಾಯಗಳಾಗಿವೆ.
ಮೃಣಾಲ್ ಅವರ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವಂತನಿಗೆ ಯಾವ ಕಾರಣಕ್ಕೆ ಚಾಕು ಹಾಕಲಾಗಿದೆ ಎಂಬುದು ಇನ್ನೂ ಮಾಹಿತಿ ಸಿಕ್ಕಿಲ್ಲ. ಖಾಸಗಿ ಆಸ್ಪತ್ರೆಗೆ ಮೃಣಾಲ್ ಹೆಬ್ಬಾಳಕರ ದೌಡಾಯಿಸಿದ್ದಾರೆ. ಬೈಕ್ ಮೇಲೆ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.
ಚಾಕು ಇರಿದ ಕ್ಲಬ್ ರಸ್ತೆಯ ಬಿ. ಶಂಕರಾನಂದ ಅವರ ಮನೆ ಎದುರಿನ ಸ್ಥಳದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಾಕು ಇರಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 