ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯಕ್ಕೆ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ.
ಬೆಳಗಾವಿ, ಏ 24,ಗಡಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-೧೯ ಕುರಿತ ಗಂಟಲು ದ್ರವ ಮಾದರಿ ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಚಾಲನೆ ನೀಡಿದರು.ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಕೇಂದ್ರ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ "ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ" ಯ ಆವರಣದಲ್ಲಿ ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿದೆ. ಸದ್ಯಕ್ಕೆ ಪ್ರತಿದಿನ 90 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯವನ್ನು ಪ್ರಯೋಗಾಲಯ ಹೊಂದಿದೆ.ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ,
ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಸತೀಶ್ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ಅಭಯ್ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ದೇವಪ್ರಸಾದ ಚಟ್ಟೋಪಾಧ್ಯಾಯ,ಮತ್ತಿತರರು ಉಪಸ್ಥಿತರಿದ್ದರು. ಪ್ರಯೋಗಾಲಯದ ನೋಡಲ್ ಅಧಿಕಾರಿಯಾಗಿರುವ ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ"ಯ ಉಪ ನಿರ್ದೇಶಕ ಡಾ.ಬನ್ನಪ್ಪ ಹಾಗೂ ವಿಜ್ಞಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 