ತಾಲೂಕಿನ 2.20 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಚಿವ ಜಾರಕಿಹೊಳಿ ಚಾಲನೆ

ತಾಲೂಕಿನ 2.20 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಚಿವ ಜಾರಕಿಹೊಳಿ ಚಾಲನೆ Minister Jarkiholi launches various works worth Rs. 2.20 crore in the taluk

ಶಿಗ್ಗಾವಿ 13 : ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೌಲಭ್ಯ ಒದಗಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.  ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಸಜ್ಜಿತ ಮೂಲಸೌಕರ್ಯ ಹಾಗೂ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಅಂದಾಜು 2 ಕೋಟಿ 20 ಲಕ್ಷ ರೂಪಾಯಿಗಳ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.  ಶಾಸಕ ಯಾಸೀರ್‌ಖಾನ್ ಪಠಾಣ್ ಅವರು ಜಂಟಿಯಾಗಿ ಭೂಮಿ ಪೂಜೆ ನೆರವೇರಿಸಿ?ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಸಚಿವರು ಹಾಗೂ ಶಾಸಕರು ಶಿಗ್ಗಾವಿ ತಾಲೂಕಿನ ಪ್ರಮುಖ ಗ್ರಾಮಗಳಿಗೆ ಭೇಟಿ ನೀಡಿ ಚಾಲನೆ ನೀಡಿದರ. 

 ಅಭಿವೃದ್ಧಿ ಕಾಮಗಾರಿಗಳ ವಿವರ:* ?ಎಸ್‌ಸಿ ಕಾಲೋನಿ ಅಭಿವೃದ್ಧಿ: ಗ್ರಾಮದ ಪರಿಶಿಷ್ಟ ಜಾತಿ (ಎಸ್‌ಸಿ) ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 50 ಲಕ್ಷ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.  ಸ್ಮಶಾನ ಅಭಿವೃದ್ಧಿ : ಸಾರ್ವಜನಿಕರ ಅನುಕೂಲಕ್ಕಾಗಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಅಂಜುಮನ್ ಶಾದಿ ಮಹಲ್‌: ಸಮುದಾಯದ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ 1 ಕೋಟಿ ರೂಪಾಯಿಗಳ ಭಾರಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಜುಮನ್ ಶಾದಿ ಹಾಲ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. 

 ಮಾರಿಕಾಂಬಾ ದೇವಸ್ಥಾನದ ಭವನ: ಕೋಣನಕೇರಿ ಗ್ರಾಮದ  ಮಾರಿಕಾಂಬಾ ದೇವಸ್ಥಾನದ ಸಮುದಾಯ ಭವನದ ಮುಂದಿನ ಹಂತದ ಕಾಮಗಾರಿಗಳಿಗಾಗಿ 20 ಲಕ್ಷ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಅದರ ಕಾಮಗಾರಿಗೂ ಚಾಲನೆ ನೀಡಲಾಯಿತು. ಶಾಸಕ ಯಾಸೀರ್‌ಖಾನ್ ಪಠಾಣ್ ಮಾತನಾಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದು, ಹಂತ ಹಂತವಾಗಿ ಎಲ್ಲಾ ಗ್ರಾಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.  ?ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.