ಚಿಕ್ಕೋಡಿ, ಅ 21: ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಸ್ಥಳಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ನಿಪ್ಪಾಣಿ ತಾಲೂಕಿನಾದ್ಯಂತ ಸಂಚರಿಸಿ ಹಾನಿಗೊಳಗಾದ ಸ್ಥಳವನ್ನು ವೀಕ್ಷಿಸಿದ ಅವರು, ಸಂತ್ರಸ್ತರ ಅಹವಾಲನ್ನು ಆಲಿಸಿದರು.
ಬಳಿಕ ಜಲಾವೃತಗೊಂಡಿರುವ ಮನೆಗಳ ಕುಟುಂಬಗಳಿಗೆ ಆಹಾರ ವ್ಯವಸ್ಥೆ ಹಾಗೂ ಮನೆ ಕಳೆದುಕೊಂಡ ಕುಟುಂಬಗಳಿಗೆ ಸೂಕ್ತ ಸ್ಥಳ ಒದಗಿಸಲಾಗಿಸುವುದಾಗಿ ಅವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.