ಕಂದಾಯ ಇಲಾಖೆ ಪ್ರಗತಿ ಪರೀಶೀಲಿಸಿದ ಸಚಿವ ಕೃಷ್ಣ ಬೈರೇಗೌಡಕಂದಾಯ ಸೇವೆಗಳು ಆನ್ಲೈನ್ ದಿಕ್ಕಿನಲ್ಲಿ: ಪ್ರಗತಿ ವೇಗಗೊಳಿಸಲು ಸಚಿವರ ಸೂಚನೆ
Minister Krishna Byre Gowda reviews progress of Revenue Department Revenue services moving towards o
ಗದಗ 10 : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗದಗ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರೀಶೀಲನಾ ಸಭೆ ನಡೆಸಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಗದಗ ಜಿಲ್ಲೆಯಲ್ಲಿ ಪೌತಿ ಆಪ್ ಮೂಲಕ ಪೈಲೆಟ್ ಯೋಜನೆ ಜಾರಿಯಲ್ಲಿದ್ದು, ಇದರ ಪ್ರಗತಿ ಇನ್ನಷ್ಟು ಹೆಚ್ಚಿಸಬೇಕು. ಕಂದಾಯ ಇಲಾಖೆ ಸಂಪರ್ಣ ಡಿಜಿಟಲೀಕರಣಗೊಳ್ಳಬೇಕು ಮತ್ತು ಈ ಪ್ರಕ್ರಿಯೆ ಮರ್ಚ್ ಅಂತ್ಯದೊಳಗೆ ಪರ್ಣಗೊಳ್ಳಬೇಕು ಎಂದು ಸಚಿವರು ತಿಳಿಸಿದರು.ಮುಂದಿನ ರ್ಷದಿಂದ ಜಮಾಬಂದಿ ಕರ್ಯವೂ ಆನ್ಲೈನ್ ಮೂಲಕ ಜಾರಿಯಾಗಲಿದ್ದು, ಇದಕ್ಕಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರ್ವಸಿದ್ಧತೆ ಕೈಗೊಳ್ಳಬೇಕು.
ರ್ವೇ ಕರ್ಯವನ್ನು ಸಂಪರ್ಣ ಕಾಗದರಹಿತಗೊಳಿಸುವುದು ರ್ಕಾರದ ಬದ್ಧತೆ. ಇನ್ನು ಮುಂದೆ ರ್ವೇ ಸ್ಕೆಚ್ಗಳು ಡಿಜಿಟಲ್ ರೂಪದಲ್ಲೇ ಇರಬೇಕು ಎಂದು ಸೂಚಿಸಿದರು.ಗದಗ ಜಿಲ್ಲೆಯಲ್ಲಿ ಆಧಾರ್ ಸೀಡಿಂಗ್ ಕರ್ಯ ಶೇ. 85.62 ರಷ್ಟು ಪರ್ಣಗೊಂಡಿದ್ದು, ಶೀಘ್ರದಲ್ಲೇ ಶೇ.100 ಸಾಧಿಸಲು ಕ್ರಮ ಕೈಗೊಳ್ಳಬೇಕು. ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ವಿಮೆ ಹಾಗೂ ಪರಿಹಾರ ನೀಡುವ ಸಂರ್ಭದಲ್ಲಿ ದಾಖಲೆಗಳು ಸರಿಯಾಗಿರುವಂತೆ ಪರೀಶೀಲನೆ ನಡೆಸುವಂತೆ ನರ್ದೇಶನ ನೀಡಿದರು.ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್ಲೋಡ್ ಕರ್ಯ ಶೇ.48 ರಷ್ಟೇ ಪರ್ಣಗೊಂಡಿರುವುದರಿಂದ ಅದನ್ನು ವೇಗಗೊಳಿಸಬೇಕು.
ಪೌತಿ ಕರ್ಯ, ಭೂ ಸುರಕ್ಷಾ ಯೋಜನೆ, ಲ್ಯಾಂಡ್ ಬೀಟ್, ಜಮಾಬಂದಿ, ಹಿಡುವಳಿ ಜಮೀನು ಪೋಡಿ ಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಉತಾರ ಸೇರಿ ಎಲ್ಲ ದಾಖಲೆಗಳು ನಾಗರಿಕರಿಗೆ ಸುಲಭವಾಗಿ ಲಭ್ಯವಾಗುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.ಕಂದಾಯ ಗ್ರಾಮಗಳ ಪ್ರಸ್ತಾವನೆ ಸಲ್ಲಿಕೆಗೆ ಮರ್ಚ್ 16 ಕೊನೆಯ ದಿನವಾಗಿದ್ದು, ಅದರೊಳಗೆ ಎಲ್ಲಾ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಗ್ರಾಮ ಲೆಕ್ಕಾಧಿಕಾರಿಗಳು ಕಚೇರಿಯಲ್ಲಿ ಜನರಿಗೆ ಸರಿಯಾಗಿ ಲಭ್ಯವಾಗಬೇಕು.
ಈಗಾಗಲೇ ಅವರಿಗೆ ಪ್ರತ್ಯೇಕ ಕಚೇರಿಗಳನ್ನು ಗುರುತಿಸಿ ನೀಡಲಾಗಿದೆ. ಆದರೂ ಗ್ರಾಮ ಲೆಕ್ಕಾಧಿಕಾರಿಗಳು ಲಭ್ಯವಾಗುತ್ತಿಲ್ಲ ಎಂಬ ದೂರುಗಳು ಬರುತ್ತಿವೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, ಇಂತಹ ಪರಿಸ್ಥಿತಿ ಮರುಕಳಿಸದಂತೆ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ವಿಧಾನ ಪರಿಷತ್ ಶಾಸಕ ಪ್ರೊ. ಎಸ್.ವಿ. ಸಂಕನೂರು ಮಾತನಾಡಿ, ರಾಜ್ಯದ 43 ಇಲಾಖೆಗಳಲ್ಲಿ ಕೇವಲ 3-4 ಇಲಾಖೆಗಳು ಮಾತ್ರ ಉತ್ತಮವಾಗಿ ಕರ್ಯನರ್ವಹಿಸುತ್ತಿವೆ ಎಂಬ ವರದಿಯಲ್ಲಿ ಕಂದಾಯ ಇಲಾಖೆಯೂ ಒಂದು ಎಂದು ಉಲ್ಲೇಖವಾಗಿದೆ.
ಕಂದಾಯ ಸಚಿವರ ಕ್ರಿಯಾಶೀಲ ಕರ್ಯದಿಂದ ಇದು ಸಾಧ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕರ್ಯಕ್ರಮಕ್ಕೆ ಪೂರಕವಾಗಿ ಕಂದಾಯ ಇಲಾಖೆಯ ಡಿಜಿಟಲೀಕರಣ ಉತ್ತಮ ಹೆಜ್ಜೆಯಾಗಿದ್ದು ಅಭಿನಂದನೀಯ ಎಂದು ಹೇಳಿದರು.ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಸಭೆಗೆ ಅಂಕಿ-ಅಂಶಗಳೊಂದಿಗೆ ಪ್ರಗತಿ ವಿವರಿಸಿದರು. ಪ್ರಗತಿ ಸಾಧಿಸದಿರುವ ಯೋಜನೆಗಳಲ್ಲಿನ ಅಡಚಣೆಗಳ ಬಗ್ಗೆ ಸಚಿವರ ಗಮನ ಸೆಳೆದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಡಿಡಿಎಲ್‌ಆರ್ ರುದ್ರಣ್ಣಗೌಡ ಜಿ.ಜೆ., ಎಸಿ ಗಂಗಪ್ಪ ಎಂ., ತಾಲ್ಲೂಕು ತಹಶೀಲ್ದಾರರು, ತಾಲೂಕು ಪಂಚಾಯತ್ ಕರ್ಯನರ್ವಾಹಕ ಅಧಿಕಾರಿಗಳು, ಕಂದಾಯ ನೀರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 