ಆಶಾ ಕಾರ್ಯಕರ್ತೆಯರ ಸಂಘದ ಜೊತೆಗೆ ಸಚಿವ ಲಾಡ್ ಸಭೆ
Minister Lad meets with ASHA workers' association
ಲೋಕದರ್ಶನ ವರದಿ
ಕಲಘಟಗಿ 01: ಇಂದು ಎಐಯುಟಿಯುಸಿ ಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಯ ಮುಖಂಡರ ಜೊತೆಗೆ ಇಂದು ಕಲಘಟಗಿಯ ತಮ್ಮ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಮಾತನಾಡಿದರು.
ಜಿಲ್ಲೆಯ ಆಶಾ ಕಾರ್ಯಕರ್ತೆಯರ ಸಮಸ್ಯೆಯನ್ನು ಆಲಿಸಿದ ಸಚಿವರು ತರ್ಕಬದ್ಧಗೊಳಿಸುವಿಕೆಯ ಕಾರಣ ನೀಡಿ ಆಶಾ ಕಾರ್ಯಕರ್ತರನ್ನು ಕೆಲಸದಿಂದ ವಜಾ ಗೊಳಿಸುವ ಬಗ್ಗೆ ಆತಂಕ ನಿವಾರಿಸುವ ನಿಟ್ಟಿನಲ್ಲಿ ನಾಳೆ ಡಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು. ನಿಮ್ಮ ಜೊತೆಗೆ ನಾನಿದ್ದೇನೆ ಎಂಬ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಭುವನಾ ಬಳ್ಳಾರಿ ಸಚಿವರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಅವರ ಆಪ್ತ ಸಹಾಯಕರಿಗೆ ಮನವಿ ಪತ್ರ ನೀಡಿದ್ದು ಅದರಂತೆ ಅವರು ಸಭೆ ಕರೆಯದಾಗಿ ಹೇಳಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮಾನ್ಯ ಸಚಿವರು ಜಿಲ್ಲೆಯ ಆಶಾ ಕಾರ್ಯಕರ್ತೆಯರ ಆತಂಕ ದೂರ ಮಾಡುತ್ತಾರೆ ಎಂಬ ಭರವಸೆ ಇದೆ. ಈ ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು, ಎಂದರು.
ನಿಯೋಗದಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ, ಆಶಾ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶೋಭಾ ಹಿರೇಮಠ, ಮಂಜುಳಾ ಗಾಡುಗೋಳಿ, ನಂದಾ ದೊಡ್ಡಮನಿ, ಮುಖಂಡರಾದ ಶೋಭಾ ಸಂತಭಾನವರ, ಶೀಲಾ ಭಾಗೋಡ, ರೇಣುಕಾ ಪಾಟೀಲ್, ಜಾಹಿರಾ, ಮಂಜುಳಾ, ಅಂಜನಾ, ಬಸಮ್ಮ ಇನ್ನೂ ಮುಂತಾದವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 