ಡಾ.ಬಿ.ಆರ್.ಅಂಬೇಡ್ಕರ್‌ರ ಭಾವಚಿತ್ರದ ಮೆರವಣಿಗೆಗೆ ಸಚಿವ ಲಾಡ್‌ರಿಂದ ಚಾಲನೆ
Minister Lad starts the procession of Dr. B.R. Ambedkar's portrait
ಧಾರವಾಡ ಏ.14: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರಣಿಗೆಗೆ ಇಂದು (ಏ.14) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಚಾಲನೆ ನೀಡಿದರು.
ವಿವಿಧ ಕಲಾತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಧಾರವಾಡ ನಗರದ ಕೋರ್ಟ ಸರ್ಕಲ್, ಸಂಗಮ ಸರ್ಕಲ್, ಮದಾರಮಡ್ಡಿ, ಭೂಸಪ್ಪ ಚೌಕ, ಮೇದಾರ ಓಣಿ, ಕೆ.ಸಿ.ಸಿ ಬ್ಯಾಂಕ್ ಮೂಲಕ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಜರುಗಿತು.
ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಎಡಿಸಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಾಧರ ದೊಡಮನಿ, ಪಶು ಪಾಲನೆ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಎಲ್ಲಾ ಸಮುದಾಯದ ಮುಖಂಡರು, ಗಣ್ಯವ್ಯಕ್ತಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯಲ್ಲಿ ಜಾನಪದ ಕುಣಿತ, ಕರಡಿ ಮಜಲು, ನಂದಿಕೋಲು, ಜಗ್ಗಲಿಗಿ ಮೇಳ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ, ಮೆರವಣಿಗೆಯ ಮೆರಗು ಹೆಚ್ಚಿಸಿದವು.
ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರೆ್ಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹು-ಧಾ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ಏ.14) ಬೆಳಿಗ್ಗೆ ಆಲೂರು ವೆಂಕಟರಾವ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸೇರಿದಂತೆ ವಿವಿಧ ಗಣ್ಯರಿಂದ ಮಾಲಾರೆ್ಣ ಮಾಡಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 