ರಸ್ತೆ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ
Minister Lakshmi Hebbalkar Bhoomi Puja for road construction
ಬೆಳಗಾವಿ 17: ಮಣ್ಣೂರು ಗ್ರಾಮದಲ್ಲಿ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಿದ್ದಾರೆ. ಪ್ರತಿಯೊಂದು ಗ್ರಾಮಗಳ ಅಭಿವೃದ್ದಿ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದ್ದೇನೆ. ವರ್ಷದ 365 ದಿನವೂ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಜನಪ್ರತಿನಿಧಿಯಾದವರು ಮನಸ್ಸು ಮಾಡಿದರೆ ಯಾವರೀತಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಬಹುದು ಎನ್ನುವುದನ್ನು ತೋರಿಸುತ್ತಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಎಸ್.ಎಲ್.ಚೌಗಲೆ, ಅಶೋಕ ಚೌಗಲೆ, ಮುಕುಂದ ತೆರಳೆ, ಜಯವಂತ ಬಾಳಕುಂದ್ರಿ, ದತ್ತು ಚೌಗಲೆ, ಜ್ಯೋತಿಬಾ ಚೌಗಲೆ, ಪುಂಡಲೀಕ ಬಾಂದುರಗಿ, ಲಲಿತಾ ನಾಯ್ಕ, ಬಾಗಣ್ಣ ನರೋಟಿ, ಸುಚೇತಾ ಸಾಂಬ್ರೇಕರ, ರಾಮು ಚೌಗಲೆ, ಕೇದಾರಿ ಚೌಗಲೆ, ಗ್ರಾಮ ಪಂಚಾಯತಿ ಎಲ್ಲ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 