ಭೀಮಣ್ಣ ಖಂಡ್ರೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
Minister Lakshmi Hebbalkar condoles the death of Bhimanna Khandre
ಬೆಳಗಾವಿ 17: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ಸಂಪುಟ ಸಹದ್ಯೋಗಿಗಳಾದ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರದ ಸಚಿವ ಈಶ್ವರ್ ಖಂಡ್ರೆ ಅವರ ತಂದೆ ಡಾ. ಭೀಮಣ್ಣ ಖಂಡ್ರೆ ಅವರು, ನಮ್ಮ ಸಮಾಜದ ಹಿರಿಯ ಮುಖಂಡರಾಗಿದ್ದರು. ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು ಎಂದು ಹೇಳಿದ್ದಾರೆ. ಡಾ. ಭೀಮಣ್ಣ ಅವರು ಹೈದ್ರಾಬಾದ್ ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ, ದೇಶದ ಸ್ವಾತಂತ್ರ್ಯ ಮುಂತಾದ ಪ್ರಮುಖ ಚಳುವಳಿಗಳಲ್ಲಿ ತೊಡಗಿಸಿಕೊಂಡು, ಶರಣ ಶ್ರೇಷ್ಠರಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಗೆ ತಮ್ಮದೇ ಆದ ಕೊಡುಗೆ ನೀಡಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅವರ ಸೇವೆ ಅಪಾರವಾಗಿತ್ತು ಎಂದು ಸ್ಮರಿಸಿದ್ದಾರೆ. ಈ ಸಮಯದಲ್ಲಿ ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಖಂಡ್ರೆ ಕುಟುಂಬಸ್ಥರಿಗೆ ಅಗಲಿಕೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 