ಹೊಲಿಗೆ ಯಂತ್ರಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar distributed sewing machines
ಬೆಳಗಾವಿ 10: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಯೋಜನೆಯಡಿಯಲ್ಲಿ ಆಯ್ಕೆಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟೂ 18 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಗುತ್ತಿದ್ದು, ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಸಚಿವರು ಆಶಿಸಿದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಚೇತನ್ ಕುಮಾರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಯಶವಂತ, ತಹಸಿಲ್ದಾರ ಬಸವರಾಜ ನಾಗರಹಾಳ, ಉಚಗಾಂವ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್ ಮೊದಲಾದವರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 