10 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
Minister Lakshmi Hebbalkar launches development work worth Rs. 10 crore
ಬೆಳಗಾವಿ 07: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಾದ್ಯಂತ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೀಗ ವೈಭವ ನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.
ಶುಕ್ರವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಸಚಿವರು ಚಾಲನೆ ನೀಡಿದರು. ಸುಮಾರು 10 ಕೋಟಿ ರೂ,ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಸ್ಥಳೀಯರ ಸಲಹೆ ಪಡೆದು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ನಾಥಬುವಾ, ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ್, ಹೆಸ್ಕಾಂ ಅಧಿಕಾರಿಗಳಾದ ಲಮಾಣಿ, ಅಶ್ವಿನ್ ಶಿಂಧೆ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ವೈಭವ ನಗರದ ನಿವಾಸಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಂತಾದವರು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 