2 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar renovated the temple at a cost of Rs. 2 crore
ಬೆಳಗಾವಿ 14: ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು.
ಜನರ ನೆಮ್ಮದಿಯೇ ನನಗೆ ಮುಖ್ಯವಾಗಿದ್ದು, ಗ್ರಾಮೀಣ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ. ಇಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಶಿವನ ದೇವಸ್ಥಾನ ನಿರ್ಮಾಣ ಮಾಡಲಾಗಿದ್ದು, ಶಿವರಾತ್ರಿಯ ಸಂದರ್ಭದಲ್ಲೇ ಉದ್ಘಾಟನೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇದೇ ವೇಳೆ ಸಚಿವರ ಹುಟ್ಟು-ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಹಾಗೂ ಹೋಮದಲ್ಲಿ ಅವರು ಪಾಲ್ಗೊಂಡು, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 