ಕೆರೆ ತುಂಬಿಸುವ ಯೋಜನೆ ಪ್ರಗತಿ ಪರೀಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar reviews the progress of the lake filling project
ಬೆಳಗಾವಿ 03: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿಬಸ್ತವಾಡ ಹಾಗೂ ಉಚಗಾಂವ ಭಾಗದ ಒಟ್ಟು 20 ಕೆರೆಗಳನ್ನು ತುಂಬಿಸುವ ಯೋಜನೆಗೆ ಸರ್ಕಾರದಿಂದ 2.39 ಕೋಟಿ ರೂ. ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಉಚಗಾಂವ ಭಾಗದ ಬಸುರ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ನೀರು ಸಂಗ್ರಹಣಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಪ್ರಗತಿ ಪರೀಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವರು, ಸಂತಿ ಬಸ್ತವಾಡ ಹಾಗೂ ಉಚಗಾಂವ ಸುತ್ತಮುತ್ತಲಿನ ಗ್ರಾಮಗಳ ರೈತರ ಅನೂಕೂಲಕ್ಕಾಗಿ ಈ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯಿಂದ ರೈತರ ಹೊಲಗದ್ದೆಗಳಿಗೆ ನೀರು ಸಿಗಲಿದೆ. ರೈತರ ಹಾಗೂ ಗ್ರಾಮೀಣ ಭಾಗದ ಆರ್ಥಿಕತೆ ದೃಷ್ಟಿಯಿಂದ ಈ ಯೋಜನೆ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ನರೇಂದ್ರ ರೆಡ್ಡಿ, ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 